ಮಂಗಳೂರು: ಕರಾವಳಿ ಭಾಗ ಹಾಗೂ ಮಲೆನಾಡು ಭಾಗಗಳಲ್ಲಿ ಮುಂಗಾರು ಚುರುಕುಗೊಂಡಿರುವುದರಿಂದ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ದ.ಕ. ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ನಾಳೆಯಿಂದ ಎರಡು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಕರಾವಳಿ ಭಾಗದಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ: ಎರಡು ದಿನ ಯೆಲ್ಲೋ ಅಲರ್ಟ್ ಘೋಷಣೆ
ಕರಾವಳಿ ಭಾಗದಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆ ದ.ಕ. ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ನಾಳೆಯಿಂದ ಎರಡು ದಿನಗಳ ಕಾಲ ಎಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಕರಾವಳಿ ಭಾಗದಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ
ಈ ವೇಳೆ 64.5 ಮಿ.ಮೀ. ನಿಂದ 115.5 ಮಿ.ಮೀ. ನಷ್ಟು ಮಳೆಯಾಗಲಿದೆ. ಅಲ್ಲದೇ ಜೂ.13 ರಿಂದ 14 ರಂದು 115.6 ಮಿ.ಮೀ.ನಿಂದ 204.4 ಮಿ.ಮೀ.ನಷ್ಟು ಮಳೆಯಾಗುವ ಸಾಧ್ಯತೆ ಇದ್ದು, ಈ ದಿನಗಳನ್ನೂ ಆರೆಂಜ್ ಅಲರ್ಟ್ ಮಾಡಲಾಗಿದೆ. ಆದ್ದರಿಂದ ಸಾರ್ವಜನಿಕರು ಎಚ್ಚರದಿಂದ ಇರಲು ಜಿಲ್ಲಾಡಳಿತ ಮನವಿ ಮಾಡಿದೆ.
ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ 24×7 ಕಂಟ್ರೋಲ್ ರೂಮ್ ನಂಬರ್ 1077 ಸಂಖ್ಯೆಗೆ ಕರೆ ಮಾಡಬಹುದು ಎಂದು ದ.ಕ.ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.