ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಗ್ರಾಮ ಪಂಚಾಯತ್ ಚುನಾವಣೆಯ ಫಲಿತಾಂಶದಲ್ಲಿ ಬಿಜೆಪಿ ಬೆಂಬಲಿತರು ಪ್ರಾಬಲ್ಯ ಸಾಧಿಸಿದ್ದಾರೆ.
ಜಿಲ್ಲೆಯಲ್ಲಿ 220 ಗ್ರಾಮ ಪಂಚಾಯತ್ಗಳಿಗೆ ಚುನಾವಣೆ ನಡೆದಿದ್ದು, ಬಿಜೆಪಿ ಬೆಂಬಲಿತರು 145 ಗ್ರಾಮ ಪಂಚಾಯತ್ಗಳಲ್ಲಿ ಅಧಿಕಾರ ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ಬೆಂಬಲಿತರು 44 ಗ್ರಾಮ ಪಂಚಾಯತ್ಗಳಲ್ಲಿ ಅಧಿಕಾರ ಪಡೆದಿದ್ದಾರೆ. ಎಸ್ಡಿಪಿಐ ಬೆಂಬಲಿತರು ಎರಡು ಕಡೆಗಳಲ್ಲಿ ಮತ್ತು ಜೆಡಿಎಸ್ ಬೆಂಬಲಿತರು ಒಂದು ಕಡೆ ಅಧಿಕಾರಕ್ಕೆ ಬಂದಿದ್ದಾರೆ. 6 ಕಡೆಗಳಲ್ಲಿ ಬಿಜೆಪಿ ಬೆಂಬಲಿತರು ಮತ್ತು ಕಾಂಗ್ರೆಸ್ ಬೆಂಬಲಿತರ ನಡುವೆ ಸಮಬಲ ಇದ್ದು 22 ಕಡೆಗಳಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ.