ಕರ್ನಾಟಕ

karnataka

ETV Bharat / state

ಮಂಗಳೂರು: ಹೊಟ್ಟೆಯಲ್ಲೇ ಮಗು ಸಾವು, ಸಂಜೆ ವೇಳೆಗೆ ತಾಯಿಯೂ ಮೃತ..ವೈದ್ಯರ ನಿರ್ಲಕ್ಷ್ಯ ಕಾರಣವಾಯ್ತಾ?

ಇಂದು ಬೆಳಗ್ಗೆ ವಿಟ್ಲದ ಸವಿತಾ ಎಂಬವರು ಹೆರಿಗೆಗೆ ಮಂಗಳೂರಿನ ಕಂಕನಾಡಿಯಲ್ಲಿರುವ ಫಾದರ್ ಮುಲ್ಲರ್ ಆಸ್ಪತ್ರೆಗೆ ಬಂದಿದ್ದರು.ಆದರೆ, ಆ ಸಂದರ್ಭದಲ್ಲಿ ಗರ್ಭಿಣಿ ಹೊಟ್ಟೆಯಲ್ಲಿರುವ ಮಗು ಸಾವನ್ನಪ್ಪಿದೆ ಎಂದು ತಿಳಿದುಬಂದಿದೆ.ನಂತರ ಸಂಜೆ ವೇಳೆಗೆ ತಾಯಿ ಕೂಡ ಸಾವಿಗೀಡಾಗಿದ್ದಾಳೆ.

ಹೊಟ್ಟೆಯಲ್ಲೇ ಮಗು ಸಾವು, ಸಂಜೆ ವೇಳೆಗೆ ಇಹಲೋಕ ತ್ಯಜಿಸಿದ ಗರ್ಭಿಣಿ: ವೈದ್ಯರ ನಿರ್ಲಕ್ಷ್ಯ ಆರೋಪ
ಹೊಟ್ಟೆಯಲ್ಲೇ ಮಗು ಸಾವು, ಸಂಜೆ ವೇಳೆಗೆ ಇಹಲೋಕ ತ್ಯಜಿಸಿದ ಗರ್ಭಿಣಿ: ವೈದ್ಯರ ನಿರ್ಲಕ್ಷ್ಯ ಆರೋಪ

By

Published : Jan 21, 2022, 11:03 PM IST

Updated : Jan 22, 2022, 2:40 PM IST

ಮಂಗಳೂರು: ಮಂಗಳೂರಿನ ಕಂಕನಾಡಿಯಲ್ಲಿ ಹೆರಿಗೆಗೆ ಬಂದ ಗರ್ಭಿಣಿ ಮತ್ತು ಮಗು ಸಾವನ್ನಪ್ಪಿದ ಘಟನೆ ನಡೆದಿದ್ದು, ವೈದ್ಯರ ನಿರ್ಲಕ್ಷ್ಯ ವೆಂದು ಸಂಬಂಧಿಕರು ಆರೋಪಿಸಿದ್ದಾರೆ.

ಇಂದು ಬೆಳಗ್ಗೆ ವಿಟ್ಲದ ಸವಿತಾ ಎಂಬವರು ಹೆರಿಗೆಗೆ ಮಂಗಳೂರಿನ ಕಂಕನಾಡಿಯಲ್ಲಿರುವ ಫಾದರ್ ಮುಲ್ಲರ್ ಆಸ್ಪತ್ರೆಗೆ ಬಂದಿದ್ದರು.ಆದರೆ, ಆ ಸಂದರ್ಭದಲ್ಲಿ ಗರ್ಭಿಣಿ ಹೊಟ್ಟೆಯಲ್ಲಿರುವ ಮಗು ಸಾವನ್ನಪ್ಪಿದೆ ಎಂದು ತಿಳಿದುಬಂದಿದೆ. ವೈದ್ಯರು ಇದನ್ನು ಮನೆಯವರ ಗಮನಕ್ಕೆ ತಂದಿದ್ದು, ಸಂಜೆಯ ವೇಳೆಗೆ ಗರ್ಭಿಣಿ ತಾಯಿ ಮೃತಪಟ್ಟಿದ್ದಾರೆ.

ಮಂಗಳೂರು ನಗರ ಪೊಲೀಸ್ ಕಮಿಷನರ್ ಶಶಿಕುಮಾರ್

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ವೈದ್ಯರು ನಿರ್ಲಕ್ಷ್ಯ ವಹಿಸಿ ಹೊಟ್ಟೆಯಲ್ಲಿದ್ದ ಮಗುವನ್ನು ತೆಗೆಯದೆ ಗರ್ಭಿಣಿ ಮೃತಪಟ್ಟಿದ್ದಾರೆ ಎಂಬುದು ಸಂಬಂಧಿಕರ ಆರೋಪವಾಗಿದ್ದು, ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ. ಘಟನೆಯ ಹಿನ್ನೆಲೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ಆಸ್ಪತ್ರೆಗೆ ಭೇಟಿ ನೀಡಿ ಮಾತುಕತೆ ನಡೆಸಿದರು.

Last Updated : Jan 22, 2022, 2:40 PM IST

For All Latest Updates

TAGGED:

ABOUT THE AUTHOR

...view details