ಕರ್ನಾಟಕ

karnataka

ETV Bharat / state

ಬೆಳ್ತಂಗಡಿಯಲ್ಲಿ ಶಿಕ್ಷಕನ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ - kannada news

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮುಂಡೂರಿನಲ್ಲಿ ನಡೆದ ಶಿಕ್ಷಕರೊಬ್ಬರ ಕೊಲೆ ಪ್ರಕರಣದ ಇಬ್ಬರು ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕೊಲೆಯಾದ ವಿಕ್ರಮ್ ಜೈನ್

By

Published : May 29, 2019, 4:23 AM IST

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮುಂಡೂರಿನಲ್ಲಿ ನಡೆದ ಶಿಕ್ಷಕರೊಬ್ಬರ ಕೊಲೆ ಪ್ರಕರಣದ ಇಬ್ಬರು ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮುಂಡೂರು ನಿವಾಸಿ ವಿಕ್ರಮ್ ಜೈನ್ (40) ಎಂಬುವರ ಕೊಲೆ ನಡೆದಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳ ಜಾಡು ಹಿಡಿದ ಬೆಳ್ತಂಗಡಿ ಪೊಲೀಸರು, ಬೈಂದೂರು ರೈಲ್ವೆ ನಿಲ್ದಾಣದಲ್ಲಿ ಕೊಲೆಯಲ್ಲಿ ಭಾಗಿಯಾಗಿದ್ದ ನಾಗೇಶ್ ಮತ್ತು ಡೀಕಯ್ಯ ಎಂಬವರನ್ನು ಬಂಧಿಸಿದ್ದಾರೆ.

ಕೊಲೆ ಆರೋಪಿಗಳು ಕೊಲೆಯಾದ ಬಳಿಕ ಮಂಗಳೂರಿಗೆ ಬಂದು ಮಂಗಳೂರಿನಿಂದ ಮುಂಬೈಗೆ ಪರಾರಿಯಾಗಲು ಯೋಜನೆ ರೂಪಿಸಿದ್ದರು. ಆದ್ರೆ ಬೆಳ್ತಂಗಡಿ ಸರ್ಕಲ್ ಇನ್ಸ್​ಪೆಕ್ಟರ್ ಸಂದೇಶ್ ಪಿ.ಜಿ. ಮತ್ತು ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ABOUT THE AUTHOR

...view details