ಕರ್ನಾಟಕ

karnataka

ETV Bharat / state

ಪುತ್ತೂರು ಹಿಂದೂ ಜಾಗರಣ ವೇದಿಕೆ‌ ಮುಖಂಡನ ಹತ್ಯೆ ಪ್ರಕರಣ: ಮೂವರ ಬಂಧನ - ಗಣೇಶೋತ್ಸವ ಕಾರ್ಯಕ್ರಮ

ಪುತ್ತೂರಿನಲ್ಲಿ ಹಿಂದೂ ಜಾಗರಣ ವೇದಿಕೆ‌ ಮುಖಂಡ ಕಾರ್ತಿಕ್ ಸುವರ್ಣ ಎಂಬುವರ ಹತ್ಯೆ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳ ಬಂಧನ

By

Published : Sep 5, 2019, 2:32 PM IST

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಹಿಂದೂ ಜಾಗರಣ ವೇದಿಕೆ‌ ಮುಖಂಡ ಕಾರ್ತಿಕ್ ಸುವರ್ಣ ಎಂಬವರ ಹತ್ಯೆ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಚರಣ್ ( 26), ಆತನ ಸಹೋದರ ಕಿರಣ್ ( 36) ಮತ್ತು ಮಂಗಳೂರು ಉಳ್ಳಾಲಬೈಲು ನಿವಾಸಿ ಪ್ರೀತೇಶ್ (28) ಬಂಧಿತ ಆರೋಪಿಗಳು.

ಪುತ್ತೂರು ತಾಲೂಕಿನ ಸಂಪ್ಯದಲ್ಲಿರುವ ಪೊಲೀಸ್ ಠಾಣಾ ಮುಂಭಾಗದಲ್ಲಿ ನಡೆದ ಗಣೇಶೋತ್ಸವ ಕಾರ್ಯಕ್ರಮದ ವೇಳೆ ಈ ಮೂವರು ಆರೋಪಿಗಳು ಕಾರ್ತಿಕ್ ಸುವರ್ಣನ ಎದೆಗೆ ಚೂರಿಯಿಂದ ಇರಿದು ಪರಾರಿಯಾಗಿದ್ದರು. ಆರೋಪಿಗಳನ್ನು ಬಂಧಿಸಿರುವ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ತನಿಖೆ‌ ಮುಂದುವರಿಸಿದ್ದಾರೆ.

ABOUT THE AUTHOR

...view details