ಕರ್ನಾಟಕ

karnataka

ETV Bharat / state

ಮಂಗಳೂರು: ಮದ್ಯ ಸೇವಿಸಿದ ಹಣ ಕೇಳಿದ್ದಕ್ಕೆ ಕೊಲೆ ಯತ್ನ, ಆರೋಪಿ ಬಂಧನ - ಫೋಲ್ಡಿಂಗ್ ಬ್ಲೇಡ್​ನಿಂದ ಇರಿದು ಕೊಲೆಗೆ ಯತ್ನ

ವ್ಯಕ್ತಿಯನ್ನು ಫೋಲ್ಡಿಂಗ್ ಬ್ಲೇಡ್​ನಿಂದ ಇರಿದು ಕೊಲೆಗೆ ಯತ್ನಿಸಿದ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಮೊಹಮ್ಮದ್ ಹನೀಫ್ ಅಲಿಯಾಸ್ ಚಾಕು
ಆರೋಪಿ ಮೊಹಮ್ಮದ್ ಹನೀಫ್ ಅಲಿಯಾಸ್ ಚಾಕು

By

Published : Aug 20, 2023, 11:58 AM IST

ಮಂಗಳೂರು (ದಕ್ಷಿಣ ಕನ್ನಡ): ಮದ್ಯ ಸೇವಿಸಿದ ಬಿಲ್ ಹಣ ಕೇಳಿದ್ದಕ್ಕೆ ವ್ಯಕ್ತಿಗೆ ಫೋಲ್ಡಿಂಗ್ ಬ್ಲೇಡ್‌ನಿಂದ ಇರಿದು ಕೊಲೆಗೆ ಯತ್ನಿಸಿದ ಆರೋಪಿಯನ್ನು ಇಲ್ಲಿನ ಪೊಲೀಸರು ಬಂಧಿಸಿದ್ದಾರೆ. ಮೈಸೂರು ಮೂಲದ ಆರೋಪಿ ಮೊಹಮ್ಮದ್ ಹನೀಫ್ ಅಲಿಯಾಸ್ ಚಾಕು (30) ಬಂಧಿತ ವ್ಯಕ್ತಿ.

ಆಗಸ್ಟ್ 18ರಂದು ರಾತ್ರಿ 10:5 ರ ವೇಳೆಗೆ ಮಂಗಳೂರು ನಗರದ ಸರ್ವಿಸ್ ಬಸ್ ನಿಲ್ದಾಣದ ಗೂಡಂಗಡಿ ಮುಂಭಾಗ ಈರಪ್ಪ ಕುರಿ ಎಂಬಾತ ಮೊಹಮ್ಮದ್ ಹನೀಫ್ ಡ್ರಿಂಕ್ಸ್ ಮಾಡಿರುವ ಬಿಲ್ ಮೊತ್ತ ಕೊಡುವಂತೆ ಕೇಳಿದ್ದಾನೆ. ಆಗ ಮೊಹಮ್ಮದ್ ಹನೀಫ್ ಕೊಲೆ ಉದ್ದೇಶದಿಂದ ವೀರೇಶ್​ ಎಂಬಾತನ ಎಡಕೈ ಹಾಗೂ ಕುತ್ತಿಗೆಯ ಹಿಂಬದಿ ಫೋಲ್ಡಿಂಗ್ ಬೇಡ್​ನಿಂದ ಇರಿದು ಜೀವ ಬೆದರಿಕೆ ಹಾಕಿದ್ದಾನೆ. ಈ ಬಗ್ಗೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿತ್ತು. ಪಿಎಸ್‌ಐ ಜ್ಯೋತಿ ಎಂ.ಜಿ. ತಮ್ಮ ಸಿಬ್ಬಂದಿಯ ಸಹಾಯದಿಂದ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಗೆ ಕೋರ್ಟ್‌ ನ್ಯಾಯಾಂಗ ಬಂಧನ ವಿಧಿಸಿದೆ.

ಮಂಗಳೂರಿನ ಇತರ ಸುದ್ದಿಗಳು: ಮಾದಕದ್ರವ್ಯ ಮಾರಾಟ, ಮೂವರು ಸೆರೆ:ಮಂಗಳೂರು ನಗರದ ಜಪ್ಪು ಕಿಂಗ್ಸ್ ಗಾರ್ಡನ್ ಬಳಿಯ ಜಪ್ಪು ಮಜಿಲ ರಸ್ತೆಯಲ್ಲಿ ಎಂಡಿಎಂಎ ಮಾದಕದ್ರವ್ಯ ಮಾರಾಟ ಮಾಡುತ್ತಿದ್ದ ಬಿ.ಕಾಂ ವಿದ್ಯಾರ್ಥಿ ಸೇರಿದಂತೆ ಮೂವರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಡ್ರೈವರ್ ಆಗಿ ವೃತ್ತಿ ನಿರ್ವಹಿಸುತ್ತಿರುವ ತಲಪಾಡಿ ನಿವಾಸಿ ಅಬ್ದುಲ್ ರವೂಫ್(30) ಕೇರಳ ರಾಜ್ಯದ ಕಣ್ಣೂರು ನಿವಾಸಿ, ಖಾಸಗಿ ಕಾಲೇಜಿನ ಬಿ.ಕಾಂ ವಿದ್ಯಾರ್ಥಿ ಉಬೈದ್ ಕುಲುಮಾನ್(21) ಹಾಗೂ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ನಿವಾಸಿ ಚಿಕನ್ ಶಾಪ್ ಉದ್ಯೋಗಿ ಮೊಹಮ್ಮದ್ ಇರ್ಷಾದ್(21) ಬಂಧಿತರು.

ಆಗಸ್ಟ್ 18ರಂದು ಮಂಗಳೂರು ದಕ್ಷಿಣ ಪೊಲೀಸರು ಕಾರ್ಯಾಚರಣೆ ನಡೆಸಿ ಮಂಗಳೂರು ನಗರದ ಜೆಪ್ಪು ಕಿಂಗ್ಸ್ ಗಾರ್ಡನ್ ಬಳಿ, ಜೆಪ್ಪು ಮಜಿಲ ರಸ್ತೆ ಬದಿಯಲ್ಲಿ ಎಂಡಿಎಂಎ ಮಾದಕದ್ರವ್ಯ ಮಾರಾಟ ಮಾಡುತ್ತಿದ್ದ ಮೂವರನ್ನು ಬಂಧಿಸಿದ್ದಾರೆ. 13,750 ರೂ. ಮೌಲ್ಯದ ಒಟ್ಟು 5.071 ಗ್ರಾಂ ಎಂಡಿಎಂಎ ಮಾದಕದ್ರವ್ಯ, 1500 ರೂ‌.‌ ನಗದು ಹಣ, ತೂಕ ಮಾಪನ, ಮೊಬೈಲ್ ಫೋನ್ ಹಾಗೂ 2 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ. ವಶಪಡಿಸಿಕೊಂಡ ವಸ್ತುಗಳ ಒಟ್ಟು ಮೌಲ್ಯ 1,77,750 ರೂ. ಎಂದು ಅಂದಾಜಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವೆನ್ಲಾಕ್ ಆಸ್ಪತ್ರೆಯಿಂದ ಪರಾರಿಯಾಗಿದ್ದ ವಿಚಾರಣಾಧೀನ ಕೈದಿ ಅರೆಸ್ಟ್:ವೆನ್ಲಾಕ್ ಆಸ್ಪತ್ರೆಯಿಂದ ಚಿಕಿತ್ಸೆಯಲ್ಲಿದ್ದ ವೇಳೆ ಪರಾರಿಯಾಗಿದ್ದ ವಿಚಾರಣಾಧೀನ ಕೈದಿಯನ್ನು ಮಂಗಳೂರು ದಕ್ಷಿಣ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳದ ಸಜಿವನಡು ನಿವಾಸಿ ಎಸ್.ಎಮ್ ನೌಫಾಲ್(32) ಬಂಧಿತ ಆರೋಪಿ.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎನ್​ಡಿಪಿಎಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಎಮ್ ನೌಫಾಲ್ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದನು. ಅನಾರೋಗ್ಯದ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಈತನನ್ನು ಪೊಲೀಸ್ ಭದ್ರತೆಯಲ್ಲಿ ಸರಕಾರಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ನೌಫಾಲ್ ಆಗಸ್ಟ್ 16ರಂದು 5.06ಕ್ಕೆ ವೆನ್ಲಾಕ್ ಆಸ್ಪತ್ರೆಯಿಂದ ಪೊಲೀಸ್ ಭದ್ರತೆಯಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದನು. ಗಾರ್ಡ್ ಕರ್ತವ್ಯದಲ್ಲಿದ್ದ ಸಚಿನ್ ಕೆ.ಎಸ್​ ನೀಡಿದ ದೂರಿನಂತೆ ಮಂಗಳೂರು ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆಗಸ್ಟ್ 19ರಂದು ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ಪಿ.ಎಸ್.ಐ ಮನೋಹರ್ ಪ್ರಸಾದ್‌ ಹಾಗೂ ಸಿಬ್ಬಂದಿ ಆರೋಪಿಯನ್ನು ದಸ್ತಗಿರಿ ಮಾಡಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.

ಇದನ್ನೂ ಓದಿ:ನಕಲಿ ಖಾತೆ ತೆರೆದು ಅಕ್ರಮ ಹಣ ವ್ಯವಹಾರ ನಡೆಸಿದ ಹ್ಯಾಕರ್​: ರಿಯಾದ್​ನಲ್ಲಿ ಕಡಬದ ಯುವಕ ಜೈಲುಪಾಲು

ABOUT THE AUTHOR

...view details