ಕರ್ನಾಟಕ

karnataka

ETV Bharat / state

ಹಿಜಾಬ್ ವಿವಾದ : ಮಂಗಳೂರಿನಲ್ಲಿ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷನಿಗೆ ಕೊಲೆ ಬೆದರಿಕೆ - ಮಂಗಳೂರಿನಲ್ಲಿ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಿಗೆ ಕೊಲೆ ಬೆದರಿಕೆ

ಸ್ಥಳೀಯ ಮೊಬೈಲ್ ನಂಬರ್‌ನಿಂದ ಕರೆ ಮಾಡಿದ ಅಪರಿಚಿತ ವ್ಯಕ್ತಿ ರಹೀಂ ಉಚ್ಚಿಲ್​​​ಗೆ ಅಸಭ್ಯವಾಗಿ ನಿಂದಿಸಿ ಜೀವ ಬೆದರಿಕೆಯೊಡ್ಡಿದ್ದಾನಂತೆ‌. ಈ ಸಂದರ್ಭದಲ್ಲಿ ರಹೀಂ ಉಚ್ಚಿಲ್ ಅಪರಿಚಿತ ವ್ಯಕ್ತಿಗೆ ಮನವರಿಕೆಗೆ ಯತ್ನಿಸಿದರೂ ಕೇಳುವ ಸ್ಥಿತಿಯಲ್ಲಿ ಆತನಿರಲಿಲ್ಲ. ಅಪರಿಚಿತನ ಜೀವ ಬೆದರಿಕೆಯ ಹಿನ್ನೆಲೆ ರಹೀಂ ಉಚ್ಚಿಲ್ ಮಂಗಳೂರಿನ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ..

ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಿಗೆ ಕೊಲೆ ಬೆದರಿಕೆ
ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಿಗೆ ಕೊಲೆ ಬೆದರಿಕೆ

By

Published : Feb 5, 2022, 6:52 PM IST

ಮಂಗಳೂರು : ರಾಜ್ಯದಲ್ಲಿ ಭುಗಿಲೆದ್ದಿರುವ ಹಿಜಾಬ್ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ್ ಅವರಿಗೆ ಕೊಲೆ ಬೆದರಿಕೆ ಬಂದಿದೆ.

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಮುಖಂಡರಾಗಿರುವ, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ್ ಖಾಸಗಿ ಮಾಧ್ಯಮಗಳಲ್ಲಿ ನಡೆದ ಚರ್ಚೆಯಲ್ಲಿ ಭಾಗವಹಿಸಿದ್ದರು. ಈ ಚರ್ಚೆಯಲ್ಲಿ ಸರ್ಕಾರದ ಪರವಾಗಿ ಹಿಜಾಬ್ ಬಗ್ಗೆ ಮಾತನಾಡಿದ್ದು, ಇದನ್ನು ವಿರೋಧಿಸಿ ಇವರಿಗೆ ಬೆದರಿಕೆ ಕರೆ ಬಂದಿದೆ ಎನ್ನಲಾಗಿದೆ.

ಸ್ಥಳೀಯ ಮೊಬೈಲ್ ನಂಬರ್‌ನಿಂದ ಕರೆ ಮಾಡಿದ ಅಪರಿಚಿತ ವ್ಯಕ್ತಿ ರಹೀಂ ಉಚ್ಚಿಲ್​​​ಗೆ ಅಸಭ್ಯವಾಗಿ ನಿಂದಿಸಿ ಜೀವ ಬೆದರಿಕೆಯೊಡ್ಡಿದ್ದಾನಂತೆ‌. ಈ ಸಂದರ್ಭದಲ್ಲಿ ರಹೀಂ ಉಚ್ಚಿಲ್ ಅಪರಿಚಿತ ವ್ಯಕ್ತಿಗೆ ಮನವರಿಕೆಗೆ ಯತ್ನಿಸಿದರೂ ಕೇಳುವ ಸ್ಥಿತಿಯಲ್ಲಿ ಆತನಿರಲಿಲ್ಲ. ಅಪರಿಚಿತನ ಜೀವ ಬೆದರಿಕೆಯ ಹಿನ್ನೆಲೆ ರಹೀಂ ಉಚ್ಚಿಲ್ ಮಂಗಳೂರಿನ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ABOUT THE AUTHOR

...view details