ಮಂಗಳೂರು: ಹಿಜಾಬ್ ವಿವಾದ ಬಳಿಕ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಲು ಅವಕಾಶವಿಲ್ಲದ ಕಾಲೇಜುಗಳಿಂದ ದೂರವಾಗುತ್ತಿದ್ದು, ಟಿಸಿ ಪಡೆದು ಬೇರೆ ಕಾಲೇಜಿಗೆ ಹೋಗುತ್ತಿದ್ದಾರೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ವಿವಿಧ ಸರ್ಕಾರಿ ಕಾಲೇಜಿನಲ್ಲಿ ಕಲಿಯುತ್ತಿದ್ದ ಮುಸ್ಲಿಂ ವಿದ್ಯಾರ್ಥಿನಿಯರಲ್ಲಿ ಶೇಕಡ 16 ಮಂದಿ ವಿದ್ಯಾರ್ಥಿನಿಯರು ಬೇರೆ ಕಾಲೇಜಿಗೆ ಹೋಗಲು ಟಿಸಿ ಪಡೆದುಕೊಂಡಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಹಿಜಾಬ್ ಪರ ಹೋರಾಟ ಮಾಡಿದ ವಿದ್ಯಾರ್ಥಿನಿ ಗೌಸಿಯಾ, ಹಿಜಾಬ್ಗೆ ಅವಕಾಶವಿರುವ ಕಾಲೇಜು ಸೇರಲು ವಿವಿಧ ಕಾಲೇಜುಗಳಿಂದ ಮುಸ್ಲಿಂ ವಿದ್ಯಾರ್ಥಿನಿಯರು ಟಿಸಿ ಪಡೆಯುತ್ತಿದ್ದಾರೆ. ಸರ್ಕಾರಿ ಕಾಲೇಜುಗಳ 34%, ಅನುದಾನಿತ ಕಾಲೇಜುಗಳ 13% ಸೇರಿದಂತೆ ಕರಾವಳಿ ಜಿಲ್ಲೆಯ ವಿವಿಧ ಕಾಲೇಜುಗಳ ಸುಮಾರು 8% ಮುಸ್ಲಿಂ ವಿದ್ಯಾರ್ಥಿನಿಯರು ವರ್ಗಾವಣೆ ಪತ್ರವನ್ನು ಪಡೆದಿದ್ದಾರೆ ಎಂದರು.