ಮಂಗಳೂರು: ನವೆಂಬರ್ 8 ರಿಂದ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿ(ಎನ್‌ಇಪಿ)ಯನ್ನು ಅಧಿಕೃತವಾಗಿ ಅನುಷ್ಠಾನಗೊಳಿಸಲಾಗುವುದು ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಡಾ.ಪಿ.ಎಸ್.ಯಡಪಡಿತ್ತಾಯ ಹೇಳಿದ್ದಾರೆ.
ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿಯ ಸಾಮಾನ್ಯ ಸಭೆಯಲ್ಲಿ ಅವರು ಈ ಮಾಹಿತಿ ನೀಡಿದ್ದಾರೆ. 2021-22ನೇ ಸಾಲಿನಲ್ಲಿ ವಿವಿಗಳಲ್ಲಿ ಎನ್‌ಇಪಿ ಜಾರಿಗೊಳಿಸಲು ಸಮಿತಿಯೊಂದನ್ನು ರಚಿಸಲಾಗಿದ್ದು, ಆ ಸಮಿತಿ ನೀಡರುವ ವರದಿ ಆಧರಿಸಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಎನ್‌ಇಪಿ ಪಠ್ಯಕ್ರಮದಲ್ಲಿ ರಾಷ್ಟ್ರೀಯ ಮಟ್ಟದ ಗುಣಮಟ್ಟ ಪಾಲನೆಗಾಗಿ ರಾಜ್ಯ ಉನ್ನತ ಶಿಕ್ಷಣ ಪರಿಷತ್‌ನ ನೇತೃತ್ವದಲ್ಲಿ ಸಮಿತಿ ರಚಿಸಿ ಶಿಕ್ಷಣ ನೀತಿಯನ್ನು ರೂಪಿಸಲಾಗಿದೆ. ಆಗಸ್ಟ್ 2018 ರಲ್ಲಿ ನಿರಪೇಕ್ಷಣಾ ಪತ್ರದ ಮೂಲಕ ಅದಕ್ಕೆ ಅನುಮತಿ ದೊರೆತಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ಭವಿಷ್ಯ ರೂಪಿಸುವ ಪಠ್ಯಕ್ರಮ, ಬೋಧನಾ ಶೈಲಿಯಲ್ಲಿ ಬದಲಾವಣೆ ಬಗ್ಗೆ ಪ್ರತಿಪಾದಿಸಿದೆ ಎಂದರು.