ಪುತ್ತೂರು(ದಕ್ಷಿಣ ಕನ್ನಡ): ನಾಗರ ಪಂಚಮಿ ಹಬ್ಬ ಎಲ್ಲೆಡೆ ಸಂಭ್ರಮ ಸಡಗರದಿಂದ ಆಚರಿಸಲ್ಪಡುತ್ತಿದೆ. ಈ ದಿನ ಭಕ್ತರು ದೇವಾಲಯಗಳಿಗೆ ತೆರಳಿ ನಾಗನಿಗೆ ತನುವನ್ನು ಎರೆಯುತ್ತಾರೆ. ಇಲ್ಲಿನ ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲೂ ನಾಗರ ಪಂಚಮಿಯನ್ನು ವಿಶೇಷವಾಗಿ ಆಚರಿಸಲಾಯಿತು.
ಬೆಳಗ್ಗೆ ದೇವಳದ ಮೂಲ ನಾಗನ ಸನ್ನಿಧಿ ಮತ್ತು ದೇವಳದ ಬಳಿಯ ವಾಸುಕೀ ನಾಗರಾಜ ಸನ್ನಿಧಿಯಲ್ಲಿ ಹಾಲಿನ ಅಭಿಷೇಕ ಮತ್ತು ಸೀಯಾಳಾಭಿಷೇಕ ಮತ್ತು ತಂಬಿಲ ಸೇವೆ ನಡೆಯಿತು. ದೇವಳದ ಪ್ರಧಾನ ಅರ್ಚಕ ವೇ ಮೂ ವಿ.ಎಸ್ ಭಟ್, ವೇ ಮೂ ಉದಯ ಭಟ್ ವೈದಿಕ ಕಾರ್ಯಕ್ರಮ ನೆರವೇರಿಸಿದರು. ಅಪಾರ ಸಂಖ್ಯೆ ಭಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.