ಕರ್ನಾಟಕ

karnataka

ETV Bharat / state

ಕೊರೊನಾ ಸೋಂಕಿನಿಂದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಗುಣಮುಖ - Mangalore News

ಕೊರೊನಾ ಸೋಂಕಿನಿಂದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್​​ ಅವರು ಗುಣಮುಖರಾಗಿದ್ದಾರೆ. ಈ ಕುರಿತು ಅವರು​ ಟ್ವೀಟ್​ ಮೂಲಕ ಮಾಹಿತಿ ನೀಡಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್

By

Published : Sep 7, 2020, 7:04 AM IST

ಮಂಗಳೂರು:ಕೊರೊನಾ ಸೋಂಕಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್​ ಅವರು ಈಗ ಪೂರ್ಣ ಗುಣಮುಖರಾಗಿದ್ದಾರೆ. ಈ ವಿಚಾರವನ್ನು ಸ್ವತಃ ನಳಿನ್​ ಕುಮಾರ್​ ಕಟೀಲ್​ ಅವರೇ ಟ್ವೀಟ್​ ಮೂಲಕ ತಿಳಿಸಿದ್ದಾರೆ.

"ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಿಯ ಕೃಪೆ, ನಿಮ್ಮೆಲ್ಲರ ಪ್ರೀತಿ, ಹಾರೈಕೆಯ ಫಲವಾಗಿ ಕೊರೊನಾ ಕಾಯಿಲೆಯಿಂದ ಗುಣಮುಖನಾಗಿದ್ದೇನೆ. ಸದ್ಯ ಕೆಲವು ದಿನಗಳ ತನಕ ಕ್ವಾರೆಂಟೈನ್​ನಲ್ಲಿ ಇರಲು ವೈದ್ಯರು ಸಲಹೆ ನೀಡಿದ್ದಾರೆ" ಎಂದು ಅವರು ತಿಳಿಸಿದ್ದಾರೆ.

"ನಾನು ಭಗವಂತನನ್ನು ಕಣ್ಣಾರೆ ನೋಡಿದವನಲ್ಲ. ಆದರೆ ತಮ್ಮ ಅಮೂಲ್ಯ ಪ್ರಾಣವನ್ನು ಪಣಕ್ಕಿಟ್ಟು ನಮ್ಮ ಆರೋಗ್ಯಕ್ಕಾಗಿ ಹಗಲಿರುಳು ಶ್ರಮಿಸುತ್ತಿರುವ ವೈದ್ಯರಲ್ಲಿ, ದಾದಿಯರಲ್ಲಿ, ಆರೋಗ್ಯ ಸಿಬ್ಬಂದಿಯಲ್ಲಿ ದೇವರನ್ನು ಕಂಡೆ" ಎಂದು ನಳಿನ್ ಕುಮಾರ್ ಟ್ವೀಟ್ ಮಾಡಿದ್ದಾರೆ.

ABOUT THE AUTHOR

...view details