ಕರ್ನಾಟಕ

karnataka

ETV Bharat / state

ಸದನದಲ್ಲಿ ಗೋಹತ್ಯೆ ನಿಷೇಧ ವಿಧೇಯಕ ಹರಿದು ಕಾಂಗ್ರೆಸ್ ತನ್ನ ನಿಜ ಬಣ್ಣ ತಿಳಿಸಿದೆ: ಕಟೀಲ್ - ಗೋಹತ್ಯೆ ನಿಷೇಧ ಮಸೂದೆ ಅಂಗೀಕಾರ

ಕಾಂಗ್ರೆಸ್ ಪಕ್ಷವು ಗೋಹತ್ಯೆಗೆ ಪ್ರಚೋದನೆ ನೀಡುವುದನ್ನು ರಾಜ್ಯದ ಜನತೆ ಕ್ಷಮಿಸುವುದಿಲ್ಲ ಎಂದ ಅವರು, ಗೋಹತ್ಯೆ ನಿಷೇಧ ಜಾರಿಗೊಳಿಸುವ ಮೂಲಕ ರಾಜ್ಯ ಬಿಜೆಪಿ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯನ್ನು ಈಡೇರಿಸಿದೆ ಎಂದರು.

ಕಟೀಲ್
ಕಟೀಲ್

By

Published : Feb 9, 2021, 4:12 AM IST

ಮಂಗಳೂರು:ಸದನದಲ್ಲಿ ಗೋಹತ್ಯೆ ನಿಷೇಧ ವಿಧೇಯಕವನ್ನು ಹರಿದು ಹಾಕುವ ಮೂಲಕ ಕಾಂಗ್ರೆಸ್ ತನ್ನ ನಿಜ ಬಣ್ಣವನ್ನು ಬಯಲು ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷವು ಗೋಹತ್ಯೆಗೆ ಪ್ರಚೋದನೆ ನೀಡುವುದನ್ನು ರಾಜ್ಯದ ಜನತೆ ಕ್ಷಮಿಸುವುದಿಲ್ಲ ಎಂದ ಅವರು, ಗೋಹತ್ಯೆ ನಿಷೇಧ ಜಾರಿಗೊಳಿಸುವ ಮೂಲಕ ರಾಜ್ಯ ಬಿಜೆಪಿ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯನ್ನು ಈಡೇರಿಸಿದೆ ಎಂದರು.

ರಾಜ್ಯ ವಿಧಾನ ಪರಿಷತ್ತಿನಲ್ಲಿ ಗೋಹತ್ಯೆ ನಿಷೇಧ ವಿಧೇಯಕ ಅಂಗೀಕಾರ ವಾಗಿರುವ ಮೂಲಕ ಬಿಜೆಪಿ ಸರ್ಕಾರ ಗೋ ಸಂರಕ್ಷಣೆಗೆ ದಿಟ್ಟ ಕ್ರಮ ಕೈಗೊಂಡಿದೆ ಎಂದರು.

ABOUT THE AUTHOR

...view details