ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳಿಗೆ ಆಹಾರ ಸಾಮಗ್ರಿಗಳ ಕಿಟ್ಗಳನ್ನು ಶಾಸಕರ ಮೂಲಕ ಹಸ್ತಾಂತರ ಮಾಡಿದರು.
ನಗರದ ಕದ್ರಿ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ 15 ಸಾವಿರ ಆಹಾರ ಸಾಮಗ್ರಿಗಳ ಕಿಟ್ಗಳನ್ನು ವಿತರಣೆ ಮಾಡಿದರು. ಬಳಿಕ ಮಾತನಾಡಿದ ಅವರು, ಬಿಜೆಪಿಯ ಪ್ರತಿಯೊಬ್ಬ ಕಾರ್ಯಕರ್ತನೂ ಐದು ಜನರಿಗೆ ಆಹಾರ ಸಾಮಾಗ್ರಿಗಳ ಕಿಟ್ ವಿತರಣೆ ಮಾಡಬೇಕೆಂದು ರಾಷ್ಟ್ರೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರು ಸೂಚಿಸಿದ್ದರು. ನಮ್ಮ ದ.ಕ ಜಿಲ್ಲೆಯ 8 ಶಾಸಕರು ರಾಜ್ಯದಲ್ಲಿಯೇ ಅತೀ ಹೆಚ್ಚು ಕಿಟ್ಗಳ ವಿತರಣೆ ಮಾಡಿ ಮಾದರಿಯಾಗಿದ್ದಾರೆ.