ಕರ್ನಾಟಕ

karnataka

ETV Bharat / state

ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ದನ ಪೂಜಾರಿ ಆಶೀರ್ವಾದ ಪಡೆದ ಕಟೀಲ್ - ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿಯವರ ಆಶೀರ್ವಾದ ಪಡೆದ ಕಟೀಲ್

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ಬಿ.ಜನಾರ್ದನ ಪೂಜಾರಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್

By

Published : Oct 25, 2020, 10:00 AM IST

ಮಂಗಳೂರು: ದಸರಾ‌ ಹಿನ್ನೆಲೆಯಲ್ಲಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಿದ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಕಾಂಗ್ರೆಸ್ ಹಿರಿಯ ಮುಖಂಡ, ಕ್ಷೇತ್ರದ ಅಭಿವೃದ್ಧಿಯ ಹರಿಕಾರ ಬಿ.ಜನಾರ್ದನ ಪೂಜಾರಿ ಅವವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ಇದಕ್ಕೂ ಮುನ್ನ ನಳಿನ್ ಕುಮಾರ್ ಕಟೀಲ್ ಅವರು ಶ್ರೀ ಗೋಕರ್ಣನಾಥ, ಪರಿವಾರ ದೇವರು ಹಾಗೂ ಶಾರದಾ ಮಾತೆ, ನವದುರ್ಗೆಯರ ದರ್ಶನ ಪಡೆದರು.

ಈ ವೇಳೆ ಮೇಯರ್ ದಿವಾಕರ್ ಪಾಂಡೇಶ್ವರ, ಶಾಸಕ ವೇದವ್ಯಾಸ ಕಾಮತ್, ರಾಜ್ಯ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಬಿಜೆಪಿ ಮುಖಂಡರುಗಳಾದ ರವೀಂದ್ರ ಶೆಟ್ಟಿ ಉಳಿದೊಟ್ಟು, ಜಗದೀಶ್ ಶೆಟ್ಟಿ ಬೋಳೂರು ಮತ್ತಿತರರು ಜೊತೆಗಿದ್ದರು.

ABOUT THE AUTHOR

...view details