ಮಂಗಳೂರು: ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆಗೆ ರಾಸಾಯನಿಕ ಹಾಗೂ ರಸಗೊಬ್ಬರ ಇಲಾಖೆ ಹಸಿರು ನಿಶಾನೆ ತೋರಿಸಿರುವುದಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಸಂತಸ ವ್ಯಕ್ತಪಡಿಸಿದ್ದಾರೆ.
ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆಗೆ ಹಸಿರು ನಿಶಾನೆ: ನಳಿನ್ ಕುಮಾರ್ ಕಟೀಲ್ ಸಂತಸ
ಮಂಗಳೂರಿನಲ್ಲಿ ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆಗೆ ಹಸಿರು ನಿಶಾನೆ ದೊರಕಿರುವುದಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಸಂತಸ ವ್ಯಕ್ತಪಡಿಸಿದ್ದಾರೆ.
ನಳಿನ್ ಕುಮಾರ್ ಕಟೀಲ್
ಈ ಕುರಿತು ಟ್ವೀಟ್ ಮಾಡಿದ ಅವರು, ಮಂಗಳೂರಿನಲ್ಲಿ ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆಗೆ ಅನುಮೋದನೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹಾಗೂ ಸಿಎಂ ಯಡಿಯೂರಪ್ಪ ಅವರಿಗೆ ಕೃತಜ್ಞತೆ ಅರ್ಪಿಸಿದ್ದಾರೆ.
ಕೇಂದ್ರ ಸರ್ಕಾರದ ಮೇಕ್ ಇನ್ ಇಂಡಿಯಾ ಯೋಜನೆಯ ಅಂಗವಾಗಿ ಗಂಜಿಮಠ ಪರಿಸರದಲ್ಲಿ ಪ್ಲಾಸ್ಟಿಕ್ ಪಾರ್ಕ್ ಅನುಷ್ಠಾನಗೊಳ್ಳಲಿದೆ. ಈ ಮೂಲಕ ಮುಂದಿನ ದಿನಗಳಲ್ಲಿ ಸ್ಥಳೀಯ ಯುವಕರಿಗೆ ಉದ್ಯೋಗಾವಕಾಶ ಸಹಿತ ಜಿಲ್ಲೆಯ ಬೆಳವಣಿಗೆಗೆ ಕಾರಣವಾಗಲಿದೆ. ಈ ಯೋಜನೆಯಿಂದ ಕಟೀಲ್ ಅವರ ಬಹುಕಾಲದ ಪ್ರಯತ್ನ ಹಾಗೂ ಸಂವಹನ ಯಶಸ್ವಿಯಾಗಿದೆ.