ಪುತ್ತೂರು (ದ.ಕ) :ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ವತಿಯಿಂದ ತಾಲೂಕಿನ ಆಶಾ ಕಾರ್ಯಕರ್ತರಿಗೆ ನಂದಿನಿ ಉತ್ಪನ್ನಗಳ ಕಿಟ್ ವಿತರಣೆ ಕಾರ್ಯಕ್ರಮ ನಡೆಯಿತು. ಇಲ್ಲಿನ ಎಸ್‌ಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಕಾರ್ಯಕ್ರಮವನ್ನು ಸರಳವಾಗಿ ಹಮ್ಮಿಕೊಳ್ಳಲಾಗಿತ್ತು.
ಹಾಲು ಒಕ್ಕೂಟದಿಂದ ಆಶಾ ಕಾರ್ಯಕರ್ತೆಯರಿಗೆ ನಂದಿನಿ ಉತ್ಪನ್ನಗಳ ಕಿಟ್ ವಿತರಣೆ ಶಾಸಕ ಸಂಜೀವ ಮಠಂದೂರು ಕಿಟ್ ವಿತರಿಸಿ ಮಾತನಾಡಿ, ಆಶಾ ಕಾರ್ಯಕರ್ತರು ತಮ್ಮ ಆರೋಗ್ಯ ಕಾಪಾಡಿಕೊಳ್ಳುವುದರ ಜೊತೆಗೆ ಸಮಾಜದ ಸ್ವಾಸ್ಥ್ಯ ಕಾಪಾಡುವ ಮೂಲಕ ಕೊರೊನಾ ಮುಕ್ತವಾಗಿಸುವ ಕಾರ್ಯ ಮಾಡುತ್ತಿರುವುದು ಶ್ಲಾಘನೀಯ. ಈ ಮೂಲಕ ಅವರ ಕಾರ್ಯದಲ್ಲಿ ಸಾರ್ಥಕತೆ ಕಾಣಲು ಸಾಧ್ಯ.
ಈ ನಿಟ್ಟಿನಲ್ಲಿ ಆಶಾ ಕಾರ್ಯಕರ್ತರು ಆರ್ಥಿಕ ಮುಗ್ಗಟ್ಟಿನ ನಡುವೆ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಅವರನ್ನು ಗುರುತಿಸುವ ಕಾರ್ಯವೂ ನಡೆದಿದೆ. ಇನ್ನೂ ಕೊರೊನಾ ಮುಕ್ತ ದೇಶವನ್ನಾಗಿ ಮಾಡಲು ನಿರಂತರ ಅರಿವು ಮೂಡಿಸುವ ಕೆಲಸ ಅಗತ್ಯ ಎಂದರು. ಕಾರ್ಯಕ್ರಮದ ಅಂಗವಾಗಿ ನಗರ ಸೇರಿ ಗ್ರಾಮೀಣ ಪ್ರದೇಶದ ಸುಮಾರು 251 ಮಂದಿ ಆಶಾ ಕಾರ್ಯಕರ್ತೆಯರಿಗೆ ಕಿಟ್ ವಿತರಿಸಲಾಯಿತು.
ವೇದಿಕೆಯಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ಅಶೋಕ್ ಕುಮಾರ್ ರೈ, ದ.ಕ ಜಿಲ್ಲಾ ಹಾಲು ಒಕ್ಕೂಟದ ಡೆಪ್ಯುಟಿ ಆಫೀಸರ್ ಡಾ.ರಾಮಕೃಷ್ಣ ಭಟ್, ಡಾ.ಸತೀಶ್, ನಿರ್ದೇಶಕ ನಾರಾಯಣ ಪ್ರಕಾಶ್ ಉಪಸ್ಥಿತರಿದ್ದರು.