ಪುತ್ತೂರು(ದಕ್ಷಿಣ ಕನ್ನಡ): ಪುತ್ತೂರಿನ ಪಿಲೋಮಿನಾ ಕಾಲೇಜಿನಲ್ಲಿ ರಾಷ್ಟ್ರಮಟ್ಟದ ವೇಟ್ ಲಿಫ್ಟರ್ ಆಗಿದ್ದ ಪುತ್ತೂರು ನಿವಾಸಿ ರಾಜೇಂದ್ರ ಪ್ರಸಾದ್(39) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಡಿ.12 ರಂದು ಪುತ್ತೂರಿನ ಪಡೀಲ್ನಲ್ಲಿರುವ ಮನೆಯಲ್ಲಿ ಹೃದಯಾಘಾತಕ್ಕೆ ಒಳಗಾಗಿದ್ದು, ಅಲ್ಲಿನ ಖಾಸಗಿ ಆಸ್ಪತ್ರೆಗೆ ಕರೆತಂದಾಗ ಮೃತಪಟ್ಟಿದ್ದಾರೆ. ಮೂಲತಃ ಪುತ್ತೂರಿನ ಕೆಮ್ಮಿಂಜೆ ನಿವಾಸಿಯಾಗಿದ್ದ ರಾಜೇಂದ್ರ ಪ್ರಸಾದ್ ಅವರು ಪುತ್ತೂರು ಫಿಲೋಮಿನಾ ಕಾಲೇಜಿನಲ್ಲಿ ವಿದ್ಯಾಭ್ಯಾಸ ಪೂರೈಸಿದರು. ಕಾಲೇಜ್ ಸಮಯದಲ್ಲಿ ವೇಟ್ ಲಿಫ್ಟರ್ ಆಗಿ ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿದ್ದರು.