ಕಡಬ:ಕಡಬ ಪೋಲಿಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಗೃಹರಕ್ಷಕ ದಳದ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಕಡಬ ಠಾಣಾಧಿಕಾರಿ ಸೇರಿದಂತೆ ಸಿಬ್ಬಂದಿ ಸಹ ಕ್ವಾರಂಟೈನ್ ಆಗಿದ್ದರು. ಸದ್ಯ ಎಲ್ಲರ ಕೋವಿಡ್ ವರದಿ ನೆಗೆಟಿವ್ ಬಂದ ಹಿನ್ನೆಲೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ.
ಕಡಬ ಠಾಣೆ ಸಿಬ್ಬಂದಿಯ ಕೋವಿಡ್ ವರದಿ ನೆಗೆಟಿವ್... ಕರ್ತವ್ಯಕ್ಕೆ ಹಾಜರು - Kadaba Mangalore latest news
ಕಡಬ ಪೋಲಿಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಗೃಹರಕ್ಷಕ ದಳದ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಕಡಬ ಠಾಣಾಧಿಕಾರಿ ಸೇರಿದಂತೆ ಸಿಬ್ಬಂದಿ ಸಹ ಕ್ವಾರಂಟೈನ್ ಆಗಿದ್ದರು. ಎಲ್ಲರ ಗಂಟಲು ದ್ರವವನ್ನು ಕೋವಿಡ್ ಪರೀಕ್ಷೆಗೆ ಕಳುಹಿಸಿದ್ದು, ಸದ್ಯ ಎಲ್ಲರ ವರದಿ ನೆಗೆಟಿವ್ ಬಂದಿದೆ.

ಕಡಬ ಎಸ್.ಐ. ರುಕ್ಮ ನಾಯ್ಕ್ ಕ್ವಾರಂಟೈನ್ನಲ್ಲಿದ್ದ ಕಾರಣ ಶನಿವಾರದಂದು ಕಡಬದಲ್ಲಿ ಹನ್ನೊಂದು ಗಂಟೆ ಕಳೆದರೂ ಜನ ಸಂಚಾರ ಮಾತ್ರ ನಿಂತಿರಲಿಲ್ಲ. ಕೋವಿಡ್ ವರದಿ ನೆಗೆಟಿವ್ ಬಂದ ಹಿನ್ನೆಲೆಯಲ್ಲಿ ಎಸ್.ಐ. ರುಕ್ಮ ನಾಯ್ಕ್ ಕರ್ತವ್ಯಕ್ಕೆ ಹಾಜರಾಗಿದ್ದು, ಸಂಡೇ ಲಾಕ್ ಡೌನ್ ನಿಯಮ ಉಲ್ಲಂಘಿಸುವವರಿಗೆ ಬಿಸಿ ಮುಟ್ಟಿಸುತ್ತಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಫೀಲ್ಡ್ ಗೆ ಇಳಿದಿರುವ ಕಡಬ ಪೊಲೀಸರು ಕಾನೂನು ಮೀರುವವರಿಗೆ ಬಿಸಿ ಮುಟ್ಟಿಸುತ್ತಿದ್ದಾರೆ.
ಇನ್ನೊಂದೆಡೆ ಸ್ಯಾನಿಟೈಸೇಶನ್ ಮಾಡುವ ಉದ್ದೇಶದಿಂದ 48 ಗಂಟೆಗಳ ಕಾಲ ಮುಚ್ಚಲಾಗಿದ್ದ ಕಡಬದ ಸಮುದಾಯ ಆರೋಗ್ಯ ಕೇಂದ್ರವು ಇಂದು ಸಂಜೆ ಸಾರ್ವಜನಿಕ ಸೇವೆಗೆ ತೆರೆದುಕೊಳ್ಳಲಿದೆ. ಪ್ರಸ್ತುತ ರೋಗಿಗಳಿಗೆ ಅಗತ್ಯ ಚಿಕಿತ್ಸೆಗಾಗಿ ಆಸ್ಪತ್ರೆಯ ಹಳೆಯ ಕಟ್ಟಡದಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ವೈದ್ಯಾಧಿಕಾರಿ ಡಾ. ಸುಚಿತ್ರಾ ರಾವ್ ತಿಳಿಸಿದ್ದಾರೆ.