ಮಂಗಳೂರು:ಸಿಎಂ ಯಡಿಯೂರಪ್ಪನವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಈಗಾಗಲೇ ಭೇಟಿಯಾಗಿ ಪ್ರವಾಹಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಒಂದು ವಾರದೊಳಗಾಗಿ ನೆರೆ ಪರಿಹಾರವನ್ನು ಕೇಂದ್ರದಿಂದ ಪ್ರಕಟಿಸಲಾಗುತ್ತೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ವಾರದೊಳಗೆ ನೆರೆ ಪರಿಹಾರ ಕೇಂದ್ರದಿಂದ ಬರುತ್ತೆ.. ಗೃಹ ಸಚಿವ ಬೊಮ್ಮಾಯಿ ಭರವಸೆ - ಕೇಂದ್ರ ಗೃಹ ಸಚಿವ
ಕೇಂದ್ರ ಗೃಹ ಸಚಿವರಿಗೆ ರಾಜ್ಯದ ನೆರೆ ಹಾವಳಿ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಾಗಿದ್ದು, ಇನ್ನೂ ಒಂದು ವಾರದೊಳಗಾಗಿ ನೆರೆ ಪರಿಹಾರದ ಹಣ ಘೋಷಣೆ ಮಾಡಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ಗೃಹ ಸಚಿವ ಬಸವರಾಜ ಬೊಮ್ಮಾಯಿ
ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಅವರು, ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.ಆರ್ಥಿಕ ಇಲಾಖೆಯ ನಿರ್ಣಯ ಅಂತಿಮಗೊಂಡಿದ್ದು, ಒಂದು ವಾರದೊಳಗೆ ಎಲ್ಲವೂ ಇತ್ಯರ್ಥವಾಗಲಿದೆ. ಉಪ ಚುನಾವಣೆ ರದ್ದಾಗಿರುವುದು ಸುಪ್ರೀಂಕೋರ್ಟ್ ತೀರ್ಪು ಎಂದು ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.