ಕರ್ನಾಟಕ

karnataka

ETV Bharat / state

ಕಂಟೇನ್​​​​​​ಮೆಂಟ್ ವಲಯಗಳಿಗೆ ನೂತನ ಜಿಲ್ಲಾಧಿಕಾರಿ ಭೇಟಿ - ಪರಿಶೀಲನೆ - Manglure DC kV rajendra news

ನೂತನ ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಅವರು ಮಂಗಳೂರು ನಗರದ ಮಂಗಳಾದೇವಿ ಪರಿಸರದ ಕಂಟೇನ್‍ಮೆಂಟ್ ವಲಯಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

Dc
Dc

By

Published : Aug 1, 2020, 10:27 AM IST

ಮಂಗಳೂರು: ನೂತನ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಗುರುವಾರ ಅಧಿಕಾರ ಸ್ವೀಕರಿಸಿದ ಡಾ.ಕೆ.ವಿ. ರಾಜೇಂದ್ರ ಅವರು ನಿನ್ನೆ ಮಹಾನಗರ ಪಾಲಿಕೆ ವ್ಯಾಪ್ತಿಯ ಕಂಟೇನ್‍ಮೆಂಟ್ ವಲಯಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಗರದ ಮಂಗಳಾದೇವಿ ಪರಿಸರದ ಕಂಟೇನ್‍ಮೆಂಟ್ ವಲಯಕ್ಕೆ ಭೇಟಿ ನೀಡಿದ ಅವರು, ಅಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಪರಿಶೀಲಿಸಿ ಅಗತ್ಯ ಸೂಚನೆಗಳನ್ನು ನೀಡಿದರು. ಜೊತೆಗೆ ಸ್ಥಳೀಯ ಮಟ್ಟದ ಅಧಿಕಾರಿಗಳು ಕಂಟೇನ್‍ಮೆಂಟ್ ವಲಯದಲ್ಲಿ ನಿಗಾ ವಹಿಸುತ್ತಿರುವ ಬಗ್ಗೆ ಮಾಹಿತಿ ಪಡೆದುಕೊಂಡರು.

ಈ ವೇಳೆ, ನಗರಪಾಲಿಕೆ ಪ್ರಭಾರ ಆಯುಕ್ತ ದಿನೇಶ್ ಕುಮಾರ್, ಉಪ ವಿಭಾಗಾಧಿಕಾರಿ ಮದನ್ ಮೋಹನ್, ತಹಶೀಲ್ದಾರ್ ಗುರುಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.

ABOUT THE AUTHOR

...view details