ಸುಬ್ರಹ್ಮಣ್ಯ:ಉಪ್ಪಿನಂಗಡಿ, ಧರ್ಮಸ್ಥಳ, ಬೆಳ್ತಂಗಡಿ ಮತ್ತು ಸುಬ್ರಹ್ಮಣ್ಯ ಪೊಲೀಸ್ ಠಾಣೆಗಳಿಗೆ ನೂತನ ಪಿಎಸ್ಐಗಳನ್ನು ನೇಮಕ ಮಾಡಿ ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ಆದೇಶ ಹೊರಡಿಸಿದ್ದಾರೆ.
ಸುಬ್ರಹ್ಮಣ್ಯ ಠಾಣಾ ಪಿಎಸ್ಐ ಎನ್.ಕೆ ಓಮನ ಅವರನ್ನು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ಮಹಿಳಾ ಎಸ್ಐ ಆಗಿ ವರ್ಗಾವಣೆಗೊಳಿಸಲಾಗಿದೆ. ಸುಬ್ರಹ್ಮಣ್ಯಕ್ಕೆ ನೂತನ ಎಸ್ಐ ಆಗಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಕಳೆದ ಕೆಲವು ಸಮಯಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಎಸ್ಐ ಜಂಬೂರಾಜ್ ಮಹಾಜನ್ ಅವರನ್ನು ವರ್ಗಾವಣೆ ಮಾಡಲಾಗಿದೆ.