ಕರ್ನಾಟಕ

karnataka

ETV Bharat / state

ಅಕ್ಟೋಬರ್ ಅಂತ್ಯದೊಳಗೆ ಮಂಗಳೂರು-ಗೋವಾ ವಂದೇ ಭಾರತ್ ಎಕ್ಸ್‌ಪ್ರೆಸ್: ಕೇಂದ್ರ ರೈಲ್ವೆ ಸಚಿವರಿಂದ ಭರವಸೆ - ಈಟಿವಿ ಭಾರತ್​ ಕನ್ನಡ ನ್ಯೂಸ್​

ಮಂಗಳೂರು ಗೋವಾ ಮಧ್ಯೆ ವಂದೇ ಭಾರತ್ ಎಕ್ಸ್‌ಪ್ರೆಸ್ ಆರಂಭದ ಬಗ್ಗೆ ನಳಿನ್ ಕುಮಾರ್ ಕಟೀಲ್​ಗೆ ಕೇಂದ್ರ ರೈಲ್ವೆ ಸಚಿವರ ಭರವಸೆ ನೀಡಿದ್ದಾರೆ.

ನಳಿನ್ ಕುಮಾರ್ ಕಟೀಲ್
ನಳಿನ್ ಕುಮಾರ್ ಕಟೀಲ್

By ETV Bharat Karnataka Team

Published : Sep 23, 2023, 7:06 AM IST

ಮಂಗಳೂರು: ಮಂಗಳೂರಿನಿಂದ ಗೋವಾಗೆ ಹೊಸ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೇವೆಯನ್ನು ಆರಂಭಿಸುವಂತೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಶುಕ್ರವಾರ ದೆಹಲಿಯಲ್ಲಿ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಮನವಿ ಸಲ್ಲಿಸಿದರು. ಈ ವೇಳೆ ಸಕಾರಾತ್ಮಕವಾಗಿ ಸ್ಪಂದಿಸಿದ ರೈಲ್ವೆ ಸಚಿವರು, ಅಕ್ಟೋಬರ್ ಅಂತ್ಯದೊಳಗೆ ಮಂಗಳೂರು-ಗೋವಾ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೇವೆ ನೀಡುವುದಾಗಿ ಭರವಸೆ ನೀಡಿದ್ದಾರೆ.

ಇದೇ ವೇಳೆ ಬೆಂಗಳೂರು-ಕಣ್ಣೂರು ರೈಲನ್ನು ಕೊಚ್ಚಿನ್​​ವರೆಗೆ ವಿಸ್ತರಿಸುವಂತೆ ಇರುವ ಕೇರಳಿಗರ ಮನವಿಯನ್ನು ಯಾವುದೇ ಕಾರಣಕ್ಕೂ ಪುರಸ್ಕರಿಸದಂತೆ ಸಚಿವರನ್ನು ಒತ್ತಾಯಿಸಿದ್ದೇನೆ. ಇದಕ್ಕೆ ಸಚಿವರು ಸ್ಪಂದಿಸಿದ್ದಾರೆ ಎಂದು ಸಂಸದರು ತಿಳಿಸಿದ್ದಾರೆ.

ಪ್ರತಿ ದಿನ ಬೆಳಗ್ಗೆ ಸುಬ್ರಹ್ಮಣ್ಯ-ಮಂಗಳೂರು ಹಾಗೂ ಸಂಜೆ ಮಂಗಳೂರು-ಸುಬ್ರಹ್ಮಣ ಮಧ್ಯೆ ಪ್ಯಾಸೆಂಜರ್ ರೈಲು ಒದಗಿಸಲು ಒಪ್ಪಿಗೆ ನೀಡಲಾಗಿದೆ. ರೈಲ್ವೆ ಇಲಾಖೆಯನ್ನು ಕೇರಳ ಹಿಡಿತದಿಂದ ತಪ್ಪಿಸಲು ದಕ್ಷಿಣ ರೈಲ್ವೆಯ ಪಾಲಕ್ಕಾಡು ವಿಭಾಗದಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆಯ ಭಾಗವನ್ನು ನೈರುತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ಸೇರಿಸಬೇಕೆಂಬ ಮನವಿಗೆ ಸಚಿವರು ಈಗಾಗಲೇ ಅಗತ್ಯ ಸೂಚನೆಯನ್ನು ನೀಡಿದ್ದಾರೆ ಎಂದು ಮಾಹಿತಿ ನೀಡಿದರು.

ದಕ್ಷಿಣ ರೈಲ್ವೆ ಹಾಗೂ ಕೊಂಕಣ ರೈಲ್ವೆಗಳ ವಿಭಾಗಳ ನಡುವೆ ಸಂಚರಿಸುವ ರೈಲುಗಳ ಅನಗತ್ಯ ವಿಳಂಬವನ್ನು ನಿವಾರಣೆಯ ಬಗ್ಗೆ ಸಚಿವರ ಗಮನ ಸೆಳೆದಾಗ ಈ ಕುರಿತು ಅನಗತ್ಯ ವಿಳಂಬವನ್ನು ನಿವಾರಣೆ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ರೈಲ್ವೆ ಸಚಿವರು ಸೂಚಿಸಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

ಸರಕು ಸಾಗಣೆಯಲ್ಲಿ ಮೈಸೂರು ರೈಲ್ವೆ ವಿಭಾಗಕ್ಕೆ ಎರಡನೇ ಸ್ಥಾನ :ಇತ್ತೀಚೆಗೆ ಮೈಸೂರು ವಿಭಾಗವೂ ಸರಕು ಸಾಗಣೆಯಲ್ಲಿ ಎರಡನೇ ಸ್ಥಾನವನ್ನು ಸಾಧಿಸಿರುವ ಹಿನ್ನೆಲೆ ರಾಜ್ಯ ಖಾತೆ ಸಚಿವ ದರ್ಶನಾ ಜರ್ದೋಶ್ ಅವರು ಮೈಸೂರು ವಿಭಾಗೀಯ ವ್ಯವಸ್ಥಾಪಕಿ ಶಿಲ್ಪಿ ಅಗರ್ವಾಲ್ ಅವರಿಗೆ ಸೆ.19 ರಂದು ಬೆಂಗಳೂರಿನಲ್ಲಿ ಎರಡನೇ ಮಂಡಳಿಯಿಂದ ಪ್ರಶಸ್ತಿ ವಿತರಣೆ ಮಾಡಿದ್ದರು.

ಭಾರತೀಯ ರೈಲ್ವೆಯ ಮೈಸೂರು ವಿಭಾಗವು ಹಿಂದಿನ ಹಣಕಾಸು ವರ್ಷಕ್ಕೆ ಹೋಲಿಸಿದರೆ ಶೇ 28% ಕ್ಕಿಂತ ಹೆಚ್ಚು ಸರಕು ಸಾಗಣೆಯ ಅಸಾಧಾರಣ ಬೆಳವಣಿಗೆಯನ್ನು ಸಾಧಿಸುವ ಮೂಲಕ ದೇಶದಲ್ಲೇ ಮಹತ್ವದ ಮೈಲಿಗಲ್ಲನ್ನು ಸಾಧಿಸಿದೆ. ಪ್ರಸಕ್ತ ವರ್ಷದ ಆಗಸ್ಟ್ ವರೆಗಿನ ಸರಕು ಸಾಗಣೆಯಲ್ಲಿ ಹಲವಾರು ಮಹತ್ವದ ಮುಖ್ಯಾಂಶಗಳು ಇಂತಿವೆ.. ಮೈಸೂರು ವಿಭಾಗವು 2023 ರ ಜನವರಿ ಮಾಸದ 1.074 ದಶಲಕ್ಷ ಟನ್​ಗಳ ಸಾಗಣೆಯ ಹಿಂದಿನ ದಾಖಲೆಯನ್ನು ಮೀರಿಸಿ, 1.119 ದಶಲಕ್ಷ ಟನ್ಗಳಷ್ಟು ಮಾಸಿಕ ಲೋಡಿಂಗ್ ಸಾಧಿಸಿದೆ.

ಇದನ್ನೂ ಓದಿ :ಭಾರತೀಯ ರೈಲ್ವೆ ಸರಕು ಸಾಗಣೆಯಲ್ಲಿ ಮೈಸೂರು ರೈಲ್ವೆ ವಿಭಾಗಕ್ಕೆ ಎರಡನೇ ಸ್ಥಾನ.. ಆದಾಯದಲ್ಲೂ ಉತ್ತಮ ಸಾಧನೆ

ABOUT THE AUTHOR

...view details