ಸುಳ್ಯ(ದಕ್ಷಿಣ ಕನ್ನಡ):ಬೆಳ್ಳಾರೆಯ ಬಿಜೆಪಿ ಯುವ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆಯ(ಎನ್‌ಐಎ) ಅಧಿಕಾರಿಗಳು ಸಾಹಿದ್ ಬೆಳ್ಳಾರೆ (34) ಎಂಬವನನ್ನು ಬಂಧಿಸಿದ್ದಾರೆ. ಈತ ಈಗಾಗಲೇ ಬಂಧಿತನಾಗಿರುವ ಆರೋಪಿ ಎಸ್‌ಡಿಪಿಐ ಮುಖಂಡ ಶಾಫಿ ಬೆಳ್ಳಾರೆ ಎಂಬಾತನ ಸಂಬಂಧಿ.
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಮತ್ತೋರ್ವ ಆರೋಪಿ ಬಂಧಿಸಿದ ಎನ್‌ಐಎ - etv bharat kannada
ಬಿಜೆಪಿ ಯುವ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಸಂಬಂಧ ಮತ್ತೋರ್ವ ಆರೋಪಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಬಂಧಿಸಿದೆ.
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಮತ್ತೋರ್ವ ಆರೋಪಿ ಬಂಧಿಸಿದ ಏನ್ಐಎ
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಇದುವರೆಗೆ ಒಟ್ಟು 14 ಆರೋಪಿಗಳನ್ನು ಬಂಧಿಸಲಾಗಿದೆ. ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಜುಲೈ 26ರಂದು ಬಿಜೆಪಿ ಯುವ ಮುಖಂಡನನ್ನು ಹಂತಕರು ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿದ್ದರು. ಈ ಪ್ರಕರಣ ರಾಜ್ಯಾದ್ಯಂತ ಸಂಚಲನ ಮೂಡಿಸಿತ್ತು. ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರವು ರಾಷ್ಟ್ರೀಯ ತನಿಖಾ ಸಂಸ್ಥೆಗೆ ವಹಿಸಿದೆ.
ಇದನ್ನೂ ಓದಿ:ಮಲತಂದೆ ಜೊತೆಗೆ ಬಲವಂತವಾಗಿ ಅಪ್ರಾಪ್ತ ಮಗಳ ಮದುವೆ ಮಾಡಿಸಿದ ತಾಯಿ!