ನೆಲ್ಯಾಡಿ:ಬಿಜೆಪಿ ಯುವ ಮುಖಂಡ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಕಾರ್ಯಾಚರಣೆ ಕೈಗೊಂಡಿರುವ ಎನ್ಐಎ ಅಧಿಕಾರಿಗಳ ತಂಡ ಕಡಬ ತಾಲೂಕಿನ ನೆಲ್ಯಾಡಿ ಸಮೀಪದ ಶಾಂತಿಬೆಟ್ಟು ನಿವಾಸಿ ಸಾದಿಕ್ ಎಂಬವರ ಮನೆಗೆ ಇಂದು ದಾಳಿ ನಡೆಸಿದೆ.
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳ ಬಂಧನ ಕಾರ್ಯಾಚರಣೆ ಕೈಗೊಂಡಿರುವ ಎನ್ಐಎ ಅಧಿಕಾರಿಗಳ ತಂಡ ನ.4ರಂದು ರಾತ್ರಿಯೇ ನೆಲ್ಯಾಡಿಗೆ ಆಗಮಿಸಿದ್ದು, ನ.5ರಂದು ಬೆಳಗ್ಗಿನಿಂದ ಕೌಕ್ರಾಡಿ ಗ್ರಾಮದ ಶಾಂತಿಬೆಟ್ಟು ಎಂಬಲ್ಲಿರುವ ಸಾದಿಕ್ ಅವರ ಮನೆಗೆ ದಾಳಿ ನಡೆಸಿ ಶೋಧ ಕಾರ್ಯ ಕೈಗೊಂಡಿದೆ. ಈ ವೇಳೆ ಮನೆಯಲ್ಲಿ ಸಾದಿಕ್ ಇರಲಿಲ್ಲ ಎಂದು ತಿಳಿದು ಬಂದಿದೆ.