ಕರ್ನಾಟಕ

karnataka

ETV Bharat / state

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾತ್ರಿ ನಿರ್ಬಂಧ ಮತ್ತೆ ಎರಡು ದಿನ ಮುಂದುವರಿಕೆ

ಕೊಲೆ ಪ್ರಕರಣದಿಂದ ಪ್ರಕ್ಷುಬ್ದ ವಾತಾವರಣ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆರಡು ದಿನ ರಾತ್ರಿ ಕರ್ಫ್ಯೂ ಮುಂದುವರೆಸಿ, ಡಿಸಿ ಆದೇಶ ಹೊರಡಿಸಿದ್ದಾರೆ.

ಮಂಗಳೂರು
ಮಂಗಳೂರು

By

Published : Aug 2, 2022, 8:01 PM IST

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾತ್ರಿ ನಿರ್ಬಂಧವನ್ನು ಮತ್ತೆ ಎರಡು ದಿನಗಳ ಕಾಲ ಮುಂದುವರಿಸಲಾಗಿದೆ. ಸರಣಿ ಹತ್ಯೆಗಳ ಹಿನ್ನೆಲೆಯಲ್ಲಿ ಕಳೆದ ಶುಕ್ರವಾರದಿಂದ ಸಂಜೆ 6 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ರಾತ್ರಿ ನೈಟ್​ ಕರ್ಫ್ಯೂ ವಿಧಿಸಲಾಗಿತ್ತು. ಈ ಸಂದರ್ಭದಲ್ಲಿ ಅಂಗಡಿಗಳನ್ನು ಮುಚ್ಚುವಂತೆ ಮತ್ತು ಅವಶ್ಯಕ ಸೇವೆ ಹೊರತುಪಡಿಸಿ ಉಳಿದೆಲ್ಲವನ್ನು ಬಂದ್ ಮಾಡುವಂತೆ ಆದೇಶಿಸಲಾಗಿತ್ತು. ಈ ಆದೇಶ ನಾಳೆ ( ಬುಧವಾರ) ಬೆಳಿಗ್ಗೆಗೆ ಮುಕ್ತಾಯವಾಗುತ್ತಿದೆ. ಇದೀಗ ಪೊಲೀಸರ ವಿನಂತಿಯ ಮೇರೆಗೆ ಈ ಆದೇಶವನ್ನು ಮತ್ತೆ ಎರಡು ದಿನ (ಗುರುವಾರದವರೆಗೆ) ಮುಂದುವರಿಸಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ABOUT THE AUTHOR

...view details