ಮಂಗಳೂರು:ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲೆಯ ವಿವಿಧ ತಾಲೂಕುಗಳ ಶಾಲೆಗಳ ಒಟ್ಟು ಒಂಬತ್ತು ವಿದ್ಯಾರ್ಥಿಗಳು 625 ರಲ್ಲಿ 625 ಅಂಕಗಳನ್ನು ಪಡೆಯುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ಕಡಬ ತಾಲೂಕಿನಲ್ಲಿ ಮೂವರು,ಮಂಗಳೂರು ಉತ್ತರದಲ್ಲಿ ಓರ್ವ ವಿದ್ಯಾರ್ಥಿನಿ,ಮಂಗಳೂರು ದಕ್ಷಿಣದಲ್ಲಿ ಓರ್ವ ವಿದ್ಯಾರ್ಥಿನಿ, ಮೂಡಬಿದಿರೆಯಲ್ಲಿ ಒಬ್ಬ ವಿದ್ಯಾರ್ಥಿ, ಬೆಳ್ತಂಗಡಿಯಲ್ಲಿ ಓರ್ವ ವಿದ್ಯಾರ್ಥಿನಿ,ಪುತ್ತೂರಿನಲ್ಲಿ ಓರ್ವ ವಿದ್ಯಾರ್ಥಿನಿ, ಬಂಟ್ವಾಳದಲ್ಲಿ ಒಬ್ಬ ವಿದ್ಯಾರ್ಥಿ ಟಾಪರ್ ಆಗಿದ್ದಾರೆ.
ರಾಜ್ಯದ ಒಟ್ಟು 157 ವಿದ್ಯಾರ್ಥಿಗಳಿಗೆ 625 ಅಂಕ:
ಕಡಬ ತಾಲೂಕಿನ, ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿನಿಯರಾದ ಅನನ್ಯ ಹಾಗೂ ವೆನೆಸಾ ಶರಿನಾ ಡಿಸೋಜಾ ,ಹಾಗೂ ನೆಲ್ಯಾಡಿ ಸಂತ ಜಾರ್ಜ್ ವಿದ್ಯಾ ಸಂಸ್ಥೆಯ ಶ್ರೀಶ ಶರ್ಮ, ಮೂಡಬಿದಿರೆ ಆಳ್ವಾಸ್ ಕನ್ನಡ ಶಾಲೆಯ ಗಣೇಶ್,ಮಂಗಳೂರಿನ ಕೆನರಾ ಪ್ರೌಢ ಶಾಲೆಯ ಕು.ಕೀರ್ತನಾ, ಹಾಗೂ ಸಂತ ಜೆರೂಸಾ ಪ್ರೌಢ ಶಾಲೆಯ ಕು.ರಿತಿಕಾ, ಬೆಳ್ತಂಗಡಿ ಸಂತ ಮೇರಿಸ್ ಇಂಗ್ಲಿಷ್ ಮೀಡಿಯಂ ಶಾಲೆಯ ಸಂಯುಕ್ತಾ ಪ್ರಭು, ಬಂಟ್ವಾಳದ ಎಸ್.ವಿ.ಎಸ್ ಟೆಂಪಲ್ ಇಂಗ್ಲಿಷ್ ಮೀಡಿಯಂ ಶಾಲೆಯ ಪ್ರತೀಕ್ ಮಲ್ಯ, ಪುತ್ತೂರಿನ ಬೆಥನಿ ಇಂಗ್ಲೀಷ್ ಮೀಡಿಯಂ ಶಾಲೆಯ ಕು.ತನೀಶಾ ರೈ, ಎಂಬವರು 625ರಲ್ಲಿ 625 ಅಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ರಾಜ್ಯದಲ್ಲಿ ಒಟ್ಟು 157 ವಿದ್ಯಾರ್ಥಿಗಳು 625 ಅಂಕ ಪಡೆದಿದ್ದಾರೆ.
'C' ಗ್ರೇಡ್ ಪಡೆದಿರುವ ಶೇ.9ರಷ್ಟು ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕ: