ಮಂಗಳೂರು:ಕಾರವಾರ ಮೂಲದ ವ್ಯಕ್ತಿಯೊಬ್ಬನು ಸ್ವಯಂ ಆಗಿ ತನಗೆ ನಿಫಾ ಇರಬಹುದು ಎಂದು ಹೇಳಿದ್ದು ಬಿಟ್ಟರೆ, ನಿಫಾಕ್ಕೆ ಸಂಬಂಧಿಸಿದ ಯಾವುದೇ ಲಕ್ಷಣಗಳು ಆತನಲ್ಲಿ ಕಾಣಿಸಿಕೊಂಡಿಲ್ಲ. ಆದರೂ ಆತನ ಸ್ವ್ಯಾಬ್ ಮಾದರಿಯನ್ನು ಬೆಂಗಳೂರು ಮೂಲಕ ಪುಣೆಯ ಲ್ಯಾಬ್ಗೆ ಕಳುಹಿಸಿಕೊಡಲಾಗಿದೆ. ಒಂದು ದಿನದೊಳಗೆ ಬರುವ ಸಾಧ್ಯತೆ ಇದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಹೇಳಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾತನಾಡಿದ ಅವರು, ಆ ವ್ಯಕ್ತಿ ಕೆಲಸ ಮಾಡುವ ಸಂಸ್ಥೆಯಲ್ಲಿ ವಿಚಾರಿಸಿದಾಗ ಅಲ್ಲಿಯೂ ಯಾರೂ ಸೋಂಕಿತರಿಲ್ಲ ಎಂಬ ಮಾಹಿತಿ ದೊರಕಿದೆ. ಈ ಬಗ್ಗೆ ಯಾವುದೇ ಭಯ ಇಲ್ಲ ಎಂದು ಹೇಳಿದರೂ, ಈ ವ್ಯಕ್ತಿ ಫೋಬಿಯಾದಿಂದ ಬಹಳ ದೃಢವಾಗಿ ನಿಫಾ ಇರುವ ಶಂಕೆ ವ್ಯಕ್ತಪಡಿಸಿರುವುದರಿಂದ ಜಿಲ್ಲಾಡಳಿತ ನಿರ್ಲಕ್ಷ್ಯ ಮಾಡದೇ ಅವರ ಮಾದರಿಯನ್ನು ಬೆಂಗಳೂರು ಮೂಲಕ ಪುಣೆಯ ಲ್ಯಾಬ್ಗೆ ಕಳುಹಿಸಿಕೊಟ್ಟಿದೆ ಎಂದರು.
ಇದನ್ನೂ ಓದಿ:ನಿಫಾ ವೈರಸ್ ಶಂಕೆ.. ಸ್ವಇಚ್ಛೆಯಿಂದ ಬಂದು ಪರೀಕ್ಷೆ ಮಾಡಿಸಿಕೊಂಡ ವ್ಯಕ್ತಿ
ಕಾರವಾರ ಮೂಲದ ಈ ವ್ಯಕ್ತಿ ಆರ್ಟಿಪಿಸಿಆರ್ ಕಿಟ್ ತಯಾರಿಕಾ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದರು. ಹಿಂದೆ ಆರ್ಟಿಪಿಸಿಆರ್ಗೆ ಸಂಬಂಧಿಸಿದ ಕಿಟ್ ತಯಾರಿಕೆಯಲ್ಲಿ ತೊಡಗಿದ್ದರೆ, ಈಗ ನಿಫಾ ಸೋಂಕಿಗೆ ಸಂಬಂಧಿಸಿದ ಕಿಟ್ ತಯಾರಿಕೆಯಲ್ಲಿ ತೊಡಗಿಸಿದ್ದರು.
ಅಲ್ಲಿ ಸಕ್ರಿಯ ಸೋಂಕು ಜೀವಾಣುಗಳನ್ನು ಬಳಸಿ ಕೆಲಸ ನಿರ್ವಹಿಸುತ್ತಿದ್ದರೂ, ಅಲ್ಲಿ ಕೆಲಸ ಮಾಡುವಾಗ ಎಲ್ಲ ಸ್ವಯಂ ರಕ್ಷಕ ಸಾಧನವನ್ನು ಧರಿಸಿಯೇ ಕೆಲಸ ಮಾಡುತ್ತಿದ್ದರು. ಆದರೂ ಆತ ಯಾವುದೇ ನಿಫಾ ಸೋಂಕಿತರ ಸಂಪರ್ಕಕ್ಕೂ ಬಂದಿಲ್ಲ. ಅಲ್ಲದೇ ಆತನಲ್ಲಿ ನಿಫಾದ ಯಾವುದೇ ಲಕ್ಷಣಗಳು ಕಂಡು ಬಂದಿಲ್ಲ. ಹಾಗಾಗಿ ಆತನನ್ನು ಶಂಕಿತ ಎನ್ನಲು ಸಾಧ್ಯವಿಲ್ಲ ಎಂದು ಜಿಲ್ಲಾಧಿಕಾರಿ ಹೇಳಿದರು.
ಪರ್ಸನಲ್ ಫೋಬಿಯಾದಿಂದ ಆಸ್ಪತ್ರೆಗೆ