ಕರ್ನಾಟಕ

karnataka

ETV Bharat / state

ಮಂಗಳೂರಿನಲ್ಲಿ ಯಾವುದೇ ಕೊರೊನಾ ಪ್ರಕರಣ ದಾಖಲಾಗಿಲ್ಲ.. ಜಿಲ್ಲಾಧಿಕಾರಿ ಸ್ಪಷ್ಟನೆ - ಕೊರೊನ ವೈರಸ್​​

ಫೆಬ್ರವರಿ 1ರಿಂದ ಈವರೆಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 25,351 ಪ್ರಯಾಣಿಕರನ್ನು ಹಾಗೂ ಪೆಣಂಬೂರಿನಲ್ಲಿರುವ ನವ ಮಂಗಳೂರು ಬಂದರ್‌ನಲ್ಲಿ ಜನವರಿ 23ರಿಂದ ಈವರೆಗೆ 5,358 ಮಂದಿಯನ್ನು ತಪಾಸಣೆಗೆ ಒಳಪಡಿಸಲಾಗಿದೆ. ಆದರೆ, ಈವರೆಗೆ ಯಾವುದೇ ಕೊರೊನಾ ಸೋಂಕು ಪತ್ತೆಯಾಗಿಲ್ಲ.

no corona cases has registered in manglore siad dc sindhu
ಮಂಗಳೂರಿನಲ್ಲಿ ಯಾವುದೇ ಕೊರೊನಾ ಪ್ರಕರಣ ದಾಖಲಾಗಿಲ್ಲ

By

Published : Mar 10, 2020, 9:42 PM IST

ಮಂಗಳೂರು:ಎಲ್ಲೆಡೆ ಕೊರೊನಾ ಭೀತಿ ಉಂಟಾಗಿರುವ ಹಿನ್ನೆಲೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 437 ಮಂದಿ ಹಾಗೂ ನವ ಮಂಗಳೂರು ಬಂದರ್‌ನಲ್ಲಿ 45 ಮಂದಿಗೆ ಕೊರೊನಾ ತಪಾಸಣೆ ನಡೆಸಲಾಗಿದೆ. ಯಾರಲ್ಲೂ ಕೊರೊನಾ ರೋಗದ ಲಕ್ಷಣ ಕಂಡು ಬಂದಿಲ್ಲ ಎಂದು ದಕ್ಷಿಣಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಹೇಳಿದರು.

ಮಂಗಳೂರಿನಲ್ಲಿ ಯಾವುದೇ ಕೊರೊನಾ ಪ್ರಕರಣ ವರದಿಯಾಗಿಲ್ಲ..

ಫೆಬ್ರವರಿ 1ರಿಂದ ಈವರೆಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 25,351 ಪ್ರಯಾಣಿಕರನ್ನು ಹಾಗೂ ಪೆಣಂಬೂರಿನಲ್ಲಿರುವ ನವ ಮಂಗಳೂರು ಬಂದರ್‌ನಲ್ಲಿ ಜನವರಿ 23ರಿಂದ ಈವರೆಗೆ 5,358 ಮಂದಿಯನ್ನು ತಪಾಸಣೆಗೆ ಒಳಪಡಿಸಲಾಗಿದೆ. ಆದರೆ, ಈವರೆಗೆ ಯಾವುದೇ ಕೊರೊನಾ ಸೋಂಕು ಪತ್ತೆಯಾಗಿಲ್ಲ.

ವಿದೇಶದಿಂದ ಬರುವ ಪ್ರಯಾಣಿಕರಲ್ಲಿ ಜ್ವರ, ನೆಗಡಿ, ಕೆಮ್ಮು, ನೆಗಡಿ, ಉಸಿರಾಟದ ಸಮಸ್ಯೆ, ಗಂಟಲು ನೋವು ಸಮಸ್ಯೆ ಕಂಡು ಬಂದಲ್ಲಿ ಕೂಡಲೇ 104, 1077 ಹಾಗೂ ದೂರವಾಣಿ ಸಂಖ್ಯೆ 0824-2442590ಗೆ ಕರೆ ಮಾಡಬಹುದು. ಇಲ್ಲದಿದ್ದಲ್ಲಿ ಹತ್ತಿರದ ಆರೋಗ್ಯ ಕೇಂದ್ರಗಳನ್ನು ಸಂಪರ್ಕ ಮಾಡಬಹುದು. ನಿಮ್ಮ ಎಲ್ಲಾ ಮಾಹಿತಿಗಳನ್ನು ಗೌಪ್ಯವಾಗಿ ಇಡಲಾಗುವುದು. ಸಾರ್ವಜನಿಕರು ಯಾವುದೇ ಆತಂಕಕ್ಕೆ ಒಳಗಾಗದೆ ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ABOUT THE AUTHOR

...view details