ಮಂಗಳೂರು :ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಡೇ ಲಾಕ್‌ಡೌನ್‌ನಲ್ಲಿ ಬೆಳಗ್ಗೆ 8 ರಿಂದ 11 ಗಂಟೆಯವರೆಗೆ ವಿನಾಯಿತಿ ಇಲ್ಲ ಎಂದು ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ 2ನೇ ಹಂತದ ಲಾಕ್‌ಡೌನ್ ಗುರುವಾರದಿಂದ ಆರಂಭವಾಗಿದೆ. ಒಂದು ವಾರಗಳ ಕಾಲ ಇರಲಿದೆ. ಈ ಸಂದರ್ಭದಲ್ಲಿ ಜನರಿಗೆ ದಿನಸಿ ಸಾಮಗ್ರಿಗಳ ಖರೀದಿಗೆ ಬೆಳಗ್ಗೆ 8 ಗಂಟೆಯಿಂದ 11 ಗಂಟೆಯವರೆಗೆ ವಿನಾಯಿತಿ ನೀಡಲಾಗಿತ್ತು. ಆದರೆ, ಭಾನುವಾರ ನಡೆಯುವ ಲಾಕ್‌ಡೌನ್‌ನಲ್ಲಿ ಬೆಳಗ್ಗೆ 8ರಿಂದ 11 ಗಂಟೆಯವರೆಗೆ ವಿನಾಯಿತಿ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ.
ದ.ಕ. ಜಿಲ್ಲೆಯಲ್ಲಿ ಸಂಡೇ ಲಾಕ್‌ಡೌನ್‌ನಲ್ಲಿ ವಿನಾಯಿತಿ ಇಲ್ಲ : ಜಿಲ್ಲಾಧಿಕಾರಿ - ಸಂಡೇ ಲಾಕ್ ಡೌನ್ ನಲ್ಲಿ ವಿನಾಯಿತಿ ಇಲ್ಲ
ಲಾಕ್ ಡೌನ್ ನಲ್ಲಿ ಜಿಲ್ಲಾಡಳಿತ ನೀಡಿದ ವಿನಾಯಿತಿ ಭಾನುವಾರದ ಲಾಕ್ ಡೌನ್ ಗೆ ಇರುವ ಬಗ್ಗೆ ವ್ಯಾಪಾರಿಗಳಿಗೆ ಮತ್ತು ಜನರಿಗೆ ಗೊಂದಲವಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ.
ಸಿಂಧೂ ರೂಪೇಶ್
ಜಿಲ್ಲೆಯಲ್ಲಿ ಒಂದು ವಾರಗಳ ಕಾಲದ ಲಾಕ್‌ಡೌನ್‌ನಲ್ಲಿ ಜಿಲ್ಲಾಡಳಿತ ನೀಡಿದ ವಿನಾಯಿತಿ ಭಾನುವಾರದ ಲಾಕ್‌ಡೌನ್‌ಗೆ ಇರುವ ಬಗ್ಗೆ ವ್ಯಾಪಾರಿಗಳಿಗೆ ಮತ್ತು ಜನರಿಗೆ ಗೊಂದಲವಿತ್ತು. ಈ ಹಿನ್ನೆಲೆ ಜಿಲ್ಲಾಡಳಿತ ಸ್ಪಷ್ಟನೆ ನೀಡಿದೆ.