ಮಂಗಳೂರು :ಮುಂದಿನ ವರ್ಷದಿಂದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಹಾಕುವಂತಿಲ್ಲ. ಆಯ್ಕೆ ಸಮಿತಿಯನ್ನು ರಚಿಸಿ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡಲಾಗುತ್ತದೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ತಿಳಿಸಿದ್ದಾರೆ.
ನಗರದ ಕೊಡಿಯಾಲ್ ಬೈಲ್‍ನಲ್ಲಿರುವ ಶಾರದಾ ವಿದ್ಯಾಲಯದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಪದ್ಮಶ್ರೀ ಪುರಸ್ಕೃತ ಮಹಾಲಿಂಗ ನಾಯಕರನ್ನು ಸನ್ಮಾನಿಸಿ ಮಾತನಾಡಿದ ಅವರು, ಪ್ರಶಸ್ತಿಯನ್ನು ಯಾರೂ ಹುಡುಕಿಕೊಂಡು ಹೋಗಬಾರದು. ಪ್ರಶಸ್ತಿ ಸಾಧಕರನ್ನು ಗುರುತಿಸಿ ನೀಡುವಂತಾಗಬೇಕು. ಆ ನಿಟ್ಟಿನಲ್ಲಿ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಹ ಸಾಧಕರ ಆಯ್ಕೆ ನಡೆಯಲಿದೆ ಎಂದರು.