ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಿಂದ ಪಾಕಿಸ್ತಾನಕ್ಕೆ ಸ್ಯಾಟ್ಲೈಟ್ ಕರೆ ಹೋಗಿಲ್ಲ ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್ ತಿಳಿಸಿದ್ದಾರೆ.
ಬೆಳ್ತಂಗಡಿಯಿಂದ ಪಾಕಿಸ್ತಾನಕ್ಕೆ ಸ್ಯಾಟ್ಲೈಟ್ ಕರೆ ಹೋಗಿಲ್ಲ: ಎಸ್ಪಿ ಸ್ಪಷ್ಟನೆ - call to Pakistan
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಿಂದ ಪಾಕಿಸ್ತಾನಕ್ಕೆ ಉಪಗ್ರಹ ಕರೆ ಹೋಗಿದೆ ಎಂದು ಹರಡಿದ್ದ ವದಂತಿ ಬಗ್ಗೆ ದಕ್ಷಿಣ ಕನ್ನಡ ಪೊಲೀಸ್ ವರಷ್ಠಾಧಿಕಾರಿ ಪಿ. ಲಕ್ಷ್ಮೀ ಪ್ರಸಾದ್ ಸ್ಪಷ್ಟೀಕರಣ ನೀಡಿದ್ದಾರೆ.
ಎಸ್ಪಿ ಲಕ್ಷ್ಮೀ ಪ್ರಸಾದ್
ರಾಜ್ಯದಲ್ಲಿ ಭಯೋತ್ಪಾಕ ಕೃತ್ಯ ಸಂಬಂಧ ಹೈಅಲರ್ಟ್ ಘೋಷಣೆ ಬೆನ್ನಲ್ಲೇ, ದೆಹಲಿಯಲ್ಲಿ ಸೆರೆಸಿಕ್ಕ ಉಗ್ರನೊಬ್ಬ ಬೆಳ್ತಂಗಡಿಯಿಂದ ಪಾಕ್ಗೆ ಸ್ಯಾಟ್ಲೈಟ್ ಕರೆ ಹೋಗಿರುವ ಬಗ್ಗೆ ಬಾಯ್ಬಿಟ್ಟಿದ್ದಾನೆ ಎಂಬ ಸುದ್ದಿ ಹರಡಿತ್ತು. ಈ ಹಿನ್ನೆಲೆಯಲ್ಲಿ ಎನ್ಐಎ ಅಧಿಕಾರಿಗಳು ಕರಾವಳಿಗೆ ಬಂದು ತನಿಖೆ ಮಾಡುತ್ತಿದ್ದಾರೆ ಎಂದು ಹೇಳಲಾಗಿತ್ತು.
ಈ ಬಗ್ಗೆ ದೂರವಾಣಿ ಕರೆ ಮೂಲಕ ಸ್ಪಷ್ಟನೆ ನೀಡಿರುವ ಲಕ್ಷ್ಮೀ ಪ್ರಸಾದ್, ಅಂತಹ ಯಾವುದೇ ಘಟನೆ ಆಗಿಲ್ಲ. ರಾಷ್ಟ್ರೀಯ ತನಿಖಾ ತಂಡದ ಅಧಿಕಾರಿಗಳು ಜಿಲ್ಲೆಗೆ ಬಂದಿರುವ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.