ಮಂಗಳೂರು: ಮಸ್ಕತ್ ನಿಂದ ಅನಿವಾಸಿ ಕನ್ನಡಿಗರನ್ನು ಹೊತ್ತು ತಂದ ವಿಮಾನ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ.
ಮಸ್ಕತ್ನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಅನಿವಾಸಿ ಕನ್ನಡಿಗರು - The corona virus
ಮಸ್ಕತ್ ನಿಂದ ಸುಮಾರು 63 ಪ್ರಯಾಣಿಕರನ್ನು ಹೊತ್ತು ತಂದ ವಿಮಾನ ರಾತ್ರಿ 8.05ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಿದೆ. ಮಸ್ಕತ್ ನಿಂದ ಬೆಂಗಳೂರಿಗೆ ಆಗಮಿಸಿ, ಅಲ್ಲಿನ ಪ್ರಯಾಣಿಕರನ್ನು ಇಳಿಸಿದ ಬಳಿಕ ಮಂಗಳೂರು ತಲುಪಿ ಮಂಗಳೂರಿನ ಪ್ರಯಾಣಿಕರನ್ನು ಇಳಿಸಿದೆ.
![ಮಸ್ಕತ್ನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಅನಿವಾಸಿ ಕನ್ನಡಿಗರು Non-resident Kannadigas return from Muscat](https://etvbharatimages.akamaized.net/etvbharat/prod-images/768-512-7283685-725-7283685-1590026009788.jpg)
ಮಸ್ಕತ್ ನಿಂದ ಸುಮಾರು 63 ಪ್ರಯಾಣಿಕರನ್ನು ಹೊತ್ತು ತಂದ ವಿಮಾನ ರಾತ್ರಿ 8.05ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಿದೆ. ಮಸ್ಕತ್ ನಿಂದ ಬೆಂಗಳೂರಿಗೆ ಆಗಮಿಸಿ, ಅಲ್ಲಿನ ಪ್ರಯಾಣಿಕರನ್ನು ಇಳಿಸಿದ ಬಳಿಕ ಮಂಗಳೂರು ತಲುಪಿ ಮಂಗಳೂರಿನ ಪ್ರಯಾಣಿಕರನ್ನು ಇಳಿಸಿದೆ.
ಆ ಬಳಿಕ ಪ್ರಯಾಣಿಕರಿಗೆ ವಿಮಾನ ನಿಲ್ದಾಣದಲ್ಲೇ ಹಣ ವರ್ಗಾವಣೆ, ಸಿಮ್ ವಿತರಣೆ, ಆರೋಗ್ಯ ಕಿಟ್ ವಿತರಣೆ, ಉಪಹಾರ ವ್ಯವಸ್ಥೆ ಮಾಡಲಾಯಿತು. ಜೊತೆಗೆ ಆರೋಗ್ಯ ಅಧಿಕಾರಿಗಳಿಂದ ಪ್ರತಿ ಪ್ರಯಾಣಿಕರ ಆರೋಗ್ಯ ತಪಾಸಣೆ ಕೂಡ ನಡೆಸಲಾಯಿತು. ಬಳಿಕ ಪ್ರಯಾಣಿಕರಿಗೆ ಸ್ಟಾಂಪಿಂಗ್ ಮಾಡಿ, ಇಮಿಗ್ರೇಷನ್ ಪ್ರಕ್ರಿಯೆ ನಡೆಸಲಾಯಿತು. ಇನ್ನೂ ಪ್ರಯಾಣಿಕರಿಗೆ ಊಟದ ವ್ಯವಸ್ಥೆಯನ್ನೂ ಏರ್ಪಡಿಸಲಾಗಿತ್ತು. ಅಲ್ಲದೆ ನಿಗದಿತ ಕ್ವಾರೆಂಟೈನ್ ಕೇಂದ್ರಗಳಿಗೆ ಕರೆದುಕೊಂಡು ಹೋಗಲು ಬಸ್ಸಿನ ವ್ಯವಸ್ಥೆ ಮಾಡಲಾಗಿದೆ.