ಕರ್ನಾಟಕ

karnataka

ETV Bharat / state

ಸುರತ್ಕಲ್ ಟೋಲ್ ಗೇಟ್ ಗುತ್ತಿಗೆ ನವೀಕರಿಸದಂತೆ ಹೆದ್ದಾರಿ ಪ್ರಾಧಿಕಾರಕ್ಕೆ ಮನವಿ - Surathkal toll gate lease not renew

ತಾತ್ಕಾಲಿಕ ನೆಲೆಯಲ್ಲಿ ಕಾರ್ಯಾಚರಿಸುತ್ತಿರುವ ಸುರತ್ಕಲ್ ಅಕ್ರಮ ಟೋಲ್ ಕೇಂದ್ರವನ್ನು ಹೆದ್ದಾರಿ ಪ್ರಾಧಿಕಾರ ತೆಗೆದುಕೊಂಡ ತೀರ್ಮಾನದಂತೆ ಅಲ್ಲಿಂದ ತೆರವುಗೊಳಿಸಬೇಕು. ಹೊಂಡ ಗುಂಡಿಗಳಿಂದ ಅಪಾಯಕಾರಿ ಸ್ಥಿತಿಗೆ ತಲುಪಿರುವ ಸುರತ್ಕಲ್, ನಂತೂರು ಹೆದ್ದಾರಿಯನ್ನು ತಕ್ಷಣ ದುರಸ್ತಿಗೊಳಿಸಬೇಕು. ಸಂಚಾರಕ್ಕೆ ಯೋಗ್ಯವಲ್ಲದ ಕೂಳೂರು ಸೇತುವೆಗೆ ಪರ್ಯಾಯವಾಗಿ ಹೊಸ ಸೇತುವೆಯನ್ನು ನಿರ್ಮಿಸಬೇಕು ಎಂದು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯು ಮನವಿ ಸಲ್ಲಿಸಿದೆ.

ಹೆದ್ದಾರಿ ಪ್ರಾಧಿಕಾರಕ್ಕೆ ಮನವಿ

By

Published : Oct 25, 2019, 7:40 PM IST

ಮಂಗಳೂರು:ಸುರತ್ಕಲ್ ಟೋಲ್ ಗೇಟ್ ಗುತ್ತಿಗೆಯು ನವೆಂಬರ್ 15ಕ್ಕೆ ಕೊನೆಗೊಳ್ಳುತ್ತಿದ್ದು, ಇದನ್ನು ಮತ್ತೆ ನವೀಕರಿಸಬಾರದು ಹಾಗೂ ಹೆದ್ದಾರಿಯ ಗುಂಡಿಗಳನ್ನು ತಕ್ಷಣ ಮುಚ್ಚುವಂತೆ ಒತ್ತಾಯಿಸಿ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಶಿಶು ಮೋಹನ್​ಗೆ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯ ನಿಯೋಗ ಇಂದು ಮನವಿ ಸಲ್ಲಿಸಿದೆ.

ತಾತ್ಕಾಲಿಕ ನೆಲೆಯಲ್ಲಿ ಕಾರ್ಯಾಚರಿಸುತ್ತಿರುವ ಸುರತ್ಕಲ್ ಅಕ್ರಮ ಟೋಲ್ ಕೇಂದ್ರವನ್ನು ಹೆದ್ದಾರಿ ಪ್ರಾಧಿಕಾರ ತೆಗೆದುಕೊಂಡ ತೀರ್ಮಾನದಂತೆ ಅಲ್ಲಿಂದ ತೆರವುಗೊಳಿಸಬೇಕು. ಹೊಂಡ ಗುಂಡಿಗಳಿಂದ ಅಪಾಯಕಾರಿ ಸ್ಥಿತಿಗೆ ತಲುಪಿರುವ ಸುರತ್ಕಲ್, ನಂತೂರು ಹೆದ್ದಾರಿಯನ್ನು ತಕ್ಷಣ ದುರಸ್ತಿಗೊಳಿಸಬೇಕು. ಸಂಚಾರಕ್ಕೆ ಯೋಗ್ಯವಲ್ಲದ ಕೂಳೂರು ಸೇತುವೆಗೆ ಪರ್ಯಾಯವಾಗಿ ಹೊಸ ಸೇತುವೆಯನ್ನು ನಿರ್ಮಿಸಬೇಕು ಎಂದು ಸಮಿತಿಯು ಮನವಿ ಮಾಡಿದೆ.

ನಿಯೋಗದಲ್ಲಿ ಡಿವೈಎಫ್ ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ, ಮಾಜಿ‌ ಶಾಸಕ ವಿಜಯ ಕುಮಾರ್ ಶೆಟ್ಟಿ, ನಾಗರಿಕ ಸಮಿತಿಯ ಅಧ್ಯಕ್ಷ ಭರತ್ ಶೆಟ್ಟಿ ಕುಳಾಯಿ, ನಾಗರಿಕ ಸಮಿತಿಯ ಕಾರ್ಯದರ್ಶಿ ಗಂಗಾಧರ ಭಂಜನ್, ಡಿವೈಎಫ್ಐ ಮುಖಂಡ ಸಂತೋಷ್ ಬಜಾಲ್, ಹೋರಾಟ ಸಮಿತಿ ಪ್ರಮುಖರಾದ ಶ್ರೀಮಾಥ್ ಕುಲಾಲ್, ನಿತಿನ್ ಬಂಗೇರ, ಅಜ್ಮಾಲ್ ಅಹ್ಮದ್, ಜನಾರ್ಧನ ಸಾಲ್ಯಾನ್ ಕುಳಾಯಿ ಉಪಸ್ಥಿತರಿದ್ದರು.

ABOUT THE AUTHOR

...view details