ಮಂಗಳೂರು: ಡ್ರಗ್ಸ್ ಪಾರ್ಟಿಯಲ್ಲಿ ನಿರೂಪಕಿ ಅನುಶ್ರೀ ಭಾಗಿಯಾಗಿದ್ದಾರೆ ಎಂದು ಅವರ ಹೆಸರು ಕೇಳಿ ಬಂದ ಹಿನ್ನೆಲೆ ಮಂಗಳೂರು ಪೊಲೀಸರು ನೋಟಿಸ್ ನೀಡಿದ್ದಾರೆ.
ಅನುಶ್ರೀಗೂ ನೋಟಿಸ್: ಶನಿವಾರ ವಿಚಾರಣೆಗೆ ಹಾಜರಾಗಲು ಸೂಚನೆ - Mangalore Police notice to Anushree
ಡ್ರಗ್ಸ್ ಪ್ರಕರಣದಲ್ಲಿ ಬಂಧಿತನಾಗಿರುವ ಬಾಲಿವುಡ್ ನಟ ಕಿಶೋರ್ ಶೆಟ್ಟಿ, ಡ್ರಗ್ಸ್ ಪಾರ್ಟಿಯಲ್ಲಿ ನಿರೂಪಕಿ ಅನುಶ್ರೀ ಭಾಗಿಯಾಗಿದ್ದರು ಎಂದು ಮಾಹಿತಿ ನೀಡಿರುವ ಹಿನ್ನೆಲೆ ಮಂಗಳೂರು ಪೊಲೀಸರು ನಿರೂಪಕಿ ಅನುಶ್ರೀಗೆ ನೋಟಿಸ್ ನೀಡಿದ್ದಾರೆ.
ಅನುಶ್ರೀ
ಇಂದು ಸಂಜೆ ಬೆಂಗಳೂರಿನಲ್ಲಿನ ಅನುಶ್ರೀ ಮನೆ ತಲುಪಿದ ಮಂಗಳೂರಿನ ಪೊಲೀಸರು, ನೋಟಿಸ್ ತಲುಪಿಸಿದ್ದಾರೆ. ಅನುಶ್ರೀ ಈ ಸಂದರ್ಭದಲ್ಲಿ ಮನೆಯಲ್ಲಿದ್ದು, ನೋಟಿಸ್ ಸ್ವೀಕರಿಸಿದ್ದಾರೆ.
ಶನಿವಾರದಂದು ಮಂಗಳೂರಿಗೆ ಬಂದು ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಸೂಚಿಸಿದ್ದಾರೆ. ಡ್ರಗ್ಸ್ ಪ್ರಕರಣದಲ್ಲಿ ಬಂಧಿತನಾಗಿರುವ ಬಾಲಿವುಡ್ ನಟ ಕಿಶೋರ್ ಶೆಟ್ಟಿ, ಡ್ರಗ್ಸ್ ಪಾರ್ಟಿಯಲ್ಲಿ ನಿರೂಪಕಿ ಅನುಶ್ರೀ ಭಾಗಿಯಾಗಿದ್ದರು ಎಂದು ಮಾಹಿತಿ ನೀಡಿರುವ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸರು ಈ ನೋಟಿಸ್ ಜಾರಿ ಮಾಡಿದ್ದಾರೆ.