ಮಂಗಳೂರು: ಅತ್ತಾವರದ ಅಪಾರ್ಟ್‌ಮೆಂಟ್‌ವೊಂದರಲ್ಲಿ ನರ್ಸಿಂಗ್ ಮಾಡುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮಂಗಳೂರಿನಲ್ಲಿ ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ - nursing student commit suicide in mangalore updates
ಮಂಗಳೂರಿನ ಅತ್ತಾವರದ ಅಪಾರ್ಟ್‌ಮೆಂಟ್‌ವೊಂದರಲ್ಲಿ ನರ್ಸಿಂಗ್ ಮಾಡುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಕೇರಳದ ಎರ್ನಾಕುಲಂ ಮೂಲದ ಅನುಪಮಾ(23) ಆತ್ಮಹತ್ಯೆ ಮಾಡಿಕೊಂಡ ನರ್ಸಿಂಗ್ ವಿದ್ಯಾರ್ಥಿನಿ ಎಂದು ತಿಳಿದು ಬಂದಿದೆ. ನಿನ್ನೆ ರಾತ್ರಿ ಸುಮಾರು 11ರ ವೇಳೆಗೆ ವಿದ್ಯಾರ್ಥಿನಿ ವಾಸವಿರುವ ರೂಂ ಬಾಗಿಲನ್ನು ತೆರೆದು ನೋಡಿದಾಗ ವಿದ್ಯಾರ್ಥಿನಿ ಮೃತದೇಹ ಫ್ಯಾನಿಗೆ ನೇಣು ಹಾಕಿದ ಸ್ಥಿತಿಯಲ್ಲಿ ಕಂಡುಬಂದಿದೆ. ಯುವತಿಯ ತಾಯಿ ವಿದೇಶದಲ್ಲಿದ್ದು, ಅನುಪಮಾ ನಗರದ ಖಾಸಗಿ ಆಸ್ಪತ್ರೆಯ ಕಾಲೇಜಿನಲ್ಲಿ ನರ್ಸಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದಳು. ಮಂಗಳೂರಿನ ಅತ್ತಾವರದ ಅಪಾರ್ಟ್‌ಮೆಂಟಿನಲ್ಲಿ ಒಂದು ವರ್ಷದಿಂದ ವಾಸವಿದ್ದಳು ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಈ ಕುರಿತು ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.