ಮಂಗಳೂರು (ದ.ಕ):ಪೆಟ್ರೋಲ್ ಡೀಸೇಲ್ ದರ ಏರಿಕೆಯಾಗಿರುವುದನ್ನು ಖಂಡಿಸಿ ಮತ್ತು ಸರ್ಕಾರ ನಿಗದಿಪಡಿಸಿದ ದರಗಳನ್ನು ನೀಡಬೇಕು ಎಂದು ಒತ್ತಾಯಿಸಿ ಓಲಾ, ಉಬರ್ ಚಾಲಕರು ಮಂಗಳೂರಿನಲ್ಲಿ ನೇಣುಹಗ್ಗ ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು.
ಇಂಧನ ದರ ಏರಿಕೆ: ನೇಣು ಹಗ್ಗ ಪ್ರದರ್ಶಿಸಿ ಓಲಾ, ಉಬರ್ ಚಾಲಕರ ಪ್ರತಿಭಟನೆ - ಓಲಾ, ಉಬರ್ ಚಾಲಕರ ಪ್ರತಿಭಟನೆ
ದ.ಕ ಜಿಲ್ಲಾ ಆನ್ಲೈನ್ ಟ್ಯಾಕ್ಸಿ ಚಾಲಕರ ಸಂಘದ ನೇತೃತ್ವದಲ್ಲಿ ನೇಣುಹಗ್ಗ ಪ್ರದರ್ಶಿಸಿ ಕೇಂದ್ರ ಸರ್ಕಾರದ ವಿರುದ್ಧ ಓಲಾ, ಉಬರ್ ಚಾಲಕರು ಘೋಷಣೆ ಕೂಗಿದರು.
ಇಲ್ಲಿನ ಮಿನಿ ವಿಧಾನಸೌಧ ಮುಂಭಾಗದಲ್ಲಿ ದ.ಕ ಜಿಲ್ಲಾ ಆನ್ಲೈನ್ ಟ್ಯಾಕ್ಸಿ ಚಾಲಕರ ಸಂಘದ ನೇತೃತ್ವದಲ್ಲಿ ನೇಣುಹಗ್ಗ ಪ್ರದರ್ಶಿಸಿ ಕೇಂದ್ರ ಹಾಗು ರಾಜ್ಯ ಸರ್ಕಾರದ ಓಲಾ, ಉಬರ್ ಚಾಲಕರು ಘೋಷಣೆ ಕೂಗಿದರು.
ಈ ಸಂದರ್ಭದಲ್ಲಿ ಮಾತನಾಡಿದ ದ.ಕ ಜಿಲ್ಲಾ ಆನ್ಲೈನ್ ಟ್ಯಾಕ್ಸಿ ಚಾಲಕರ ಸಂಘದ ಮುಖಂಡ ಬಿ.ಕೆ.ಇಮ್ತಿಯಾಝ್, ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆಯಿಂದ ಓಲಾ, ಉಬರ್ ಚಾಲಕರು ಸಂಕಷ್ಟಕ್ಕೊಳಗಾಗಿದ್ದಾರೆ. ವಾಹನ ಸಾಲದ ಇಎಮ್ಐ, ಮನೆ ಬಾಡಿಗೆ ಹಾಗು ಶಾಲಾ ಮಕ್ಕಳ ಫೀಸ್ ಕಟ್ಟಲು ಪರದಾಡುತ್ತಿದ್ದಾರೆ. ಡೀಸೆಲ್, ಪೆಟ್ರೋಲ್ ಬೆಲೆ ಇಳಿಕೆ ಮಾಡುವುದರ ಜೊತೆಗೆ ಓಲಾ, ಉಬರ್ ಸಂಸ್ಥೆಗಳು ಸರ್ಕಾರ ನಿರ್ದೇಶಿಸಿದ ದರಗಳನ್ನು ಚಾಲಕರಿಗೆ ನೀಡಬೇಕು ಎಂದು ಒತ್ತಾಯಿಸಿದರು.