ಮಂಗಳೂರು: ವೆನ್ಲಾಕ್ ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯತ್ತಿರುವವರ ಪೈಕಿ ಓರ್ವ ಸೋಂಕಿನಿಂದ ಗುಣಮುಖನಾಗಿ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಜಿಲ್ಲಾಧಿಕಾರಿಗಳ ಪತ್ರಿಕಾ ಪ್ರಕಟಣೆ ಪ್ರತಿ ಮಂಗಳೂರಿನ ಕುಲಶೇಖರ ನಿವಾಸಿ 45 ವರ್ಷದ ವ್ಯಕ್ತಿ ಏ.23ರಂದು ಸೋಂಕು ದೃಢಪಟ್ಟು ಆಸ್ಪತ್ರೆಗೆ ದಾಖಲಾಗಿದ್ದರು. ಗುಣಮುಖರಾದ ಹಿನ್ನೆಲೆ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಸೋಂಕು ಶಂಕೆಯ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಗುರುವಾರ 333 ಜನರ ಗಂಟಲು ದ್ರವದ ಸ್ಯಾಂಪಲ್ ಪರೀಕ್ಷೆಗೆ ರವಾನಿಸಲಾಗಿದೆ. ಈ ಹಿಂದೆ ಕಳುಹಿದ್ದ 502 ಶಂಕಿತರ ವರದಿ ಬಂದಿದ್ದು, ಅದರಲ್ಲಿ 496 ಮಂದಿಯಲ್ಲಿ ನೆಗೆಟಿವ್ ವರದಿ ಬಂದಿದೆ. 6 ಮಂದಿಯಲ್ಲಿ ಸೋಂಕು ಇರುವುದು ಪತ್ತೆಯಾಗಿದೆ.
ಇನ್ನೂ 408 ಮಂದಿಯ ವರದಿ ಬರಬೇಕಿದ್ದು, ಒಟ್ಟು 15 ಮಂದಿ ನಿಗಾದಲ್ಲಿದ್ದಾರೆ. 14 ಮಂದಿಯನ್ನು ಮಂಗಳೂರಿನ ಇಎಸ್ಐ ಹಾಸ್ಪಿಟಲ್ನ ಕ್ವಾರಂಟೈನ್ನಲ್ಲಿ ಇರಿಸಲಾಗಿದ್ದು, 32 ಮಂದಿಯನ್ನು ಸುರತ್ಕಲ್ನ ಎನ್ಐಟಿಕೆ ಕ್ವಾರಂಟೈನ್ ಕೇಂದ್ರದಲ್ಲಿ ಇರಿಸಲಾಗಿದೆ. 6,073 ಜನರು 28 ದಿನಗಳ ಹೋಮ್ ಕ್ವಾರಂಟೈನ್ ಮುಗಿಸಿದ್ದಾರೆ. ಇಂದು 171 ಮಂದಿಯನ್ನು ಸ್ಕ್ರೀನಿಂಗ್ ಮಾಡಲಾಗಿದ್ದು, ಮಂಗಳೂರಲ್ಲಿ ಈವರೆಗೆ 41,765 ಜನರನ್ನು ಸ್ಕ್ರೀನಿಂಗ್ ಮಾಡಲಾಗಿದೆ.
ಈವರೆಗೆ 6,053 ಮಂದಿಯ ಗಂಟಲು ದ್ರವ ಪಡೆಯಲಾಗಿದ್ದು, ಆ ಪೈಕಿ 5,645 ಮಂದಿಯ ವರದಿ ಬಂದಿದೆ. ಅದರಲ್ಲಿ 5,584 ಮಂದಿಯ ನೆಗೆಟಿವ್ ಎಂದಿದೆ. 61 ಜನರಲ್ಲಿ ಸೋಂಕು ದೃಢಪಟ್ಟಿದ್ದು, 21 ಮಂದಿ ಚಿಕಿತ್ಸೆ ಮುಗಿಸಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. 35 ಮಂದಿ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 5 ಮಂದಿ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.