ಕರ್ನಾಟಕ

karnataka

By

Published : Jul 26, 2020, 10:11 AM IST

ETV Bharat / state

ಭೀಕರ ರಸ್ತೆ ಅಪಘಾತ: ಓರ್ವ ಸಾವು, ಮತ್ತೋರ್ವನ ಸ್ಥಿತಿ ಗಂಭೀರ

ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಮತ್ತೋರ್ವನ ಸ್ಥಿತಿ ಗಂಭೀರವಾದ ಘಟನೆ ನಡೆದಿದೆ.

Accident
Accident

ಉಪ್ಪಿನಂಗಡಿ: ಲಾರಿ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಮೃತಪಟ್ಟಿದ್ದು, ಮತ್ತೋರ್ವನ ಸ್ಥಿತಿ ಗಂಭೀರವಾದ ಘಟನೆ ಉಪ್ಪಿನಂಗಡಿ ಸಮೀಪ ‌ಮಠ ಎಂಬಲ್ಲಿ ನಿನ್ನೆ ರಾತ್ರಿ ನಡೆದಿದೆ.

ಉಪ್ಪಿನಂಗಡಿಯ ನಟ್ಟಿಬೈಲು ನಿವಾಸಿ ಗಣೇಶ್ (23) ಎಂಬುವರು ಮೃತಪಟ್ಟಿದ್ದು, ಪುತ್ತೂರಿನ ಪುರುಷರಕಟ್ಟೆ ನಿವಾಸಿ ನವೀನ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರಂತ ಸಂಭವಿಸಿದೆ.

ಗಣೇಶ್ ಮತ್ತು ನವೀನ್ ಬೈಕ್​ನಲ್ಲಿ ಉಪ್ಪಿನಂಗಡಿಯಿಂದ ನೆಲ್ಯಾಡಿ ಕಡೆಗೆ ಹೋಗುತ್ತಿದ್ದಾಗ ಹಾಸನ ಕಡೆಯಿಂದ ಮಂಗಳೂರಿಗೆ ತರಕಾರಿ ಸಾಗಿಸುತ್ತಿದ್ದ ಲಾರಿಯೊಂದು ಮಠ ಎಂಬಲ್ಲಿ ಮುಖಾಮುಖಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರರಿಬ್ಬರೂ ಕೆಳಗೆ ಬಿದ್ದಿದ್ದು, ಗಣೇಶ್ ಅವರನ್ನು ಅಸ್ಪತ್ರೆಗೆ ಸಾಗಿಸುತ್ತಿರುವಾಗ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ನವೀನ್ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ABOUT THE AUTHOR

...view details