ಬಂಟ್ವಾಳ (ದಕ್ಷಿಣ ಕನ್ನಡ): ಬಂಟ್ವಾಳ ತಾಲೂಕಿನ ಬೆಂಜನಪದವಿನಲ್ಲಿ ಬುಧವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ ಯುವತಿಯೋರ್ವಳು ಸಾವಿಗೀಡಾಗಿದ್ದಾಳೆ.
ಬೆಂಜನಪದವಿನಲ್ಲಿ ಕಾರ್ -ಸ್ಕೂಟರ್ ನಡುವೆ ಅಪಘಾತ: ಯುವತಿ ಸಾವು - ಮಂಗಳೂರಲ್ಲಿ ಅಪಘಾತ
ಕಾರೊಂದು ಸ್ಕೂಟರ್ಗೆ ಡಿಕ್ಕಿ ಹೊಡೆದ ಪರಿಣಾಮ, ಸ್ಕೂಟರ್ ಓಡಿಸುತ್ತಿದ್ದ ಯುವತಿ ಗಂಭಿರ ಗಾಯಗೊಂಡು ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾಳೆ.
ಕಾರ್ -ಸ್ಕೂಟರ್ ನಡುವೆ ಅಪಘಾತ
ಸ್ಕೂಟರ್ ಒಂದಕ್ಕೆ ಕಾರು ಡಿಕ್ಕಿಯಾದ ಪರಿಣಾಮ ಸ್ಕೂಟರ್ನಲ್ಲಿ ಸಂಚರಿಸುತ್ತಿದ್ದ ಶ್ಯಾಮಲಾ (23) ಯುವತಿ ಗಂಭೀರ ಗಾಯಗೊಂಡಿದ್ದಾಳೆ. ತಕ್ಷಣ ಆಸ್ಪತ್ರೆಗೆ ದಾಖಲಿಸಿದರಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾಳೆ.
ಮೃತಪಟ್ಟ ಶ್ಯಾಮಲಾ, ಬಂಟ್ವಾಳದ ಕ್ಷೇತ್ರ ಶಿಕ್ಷಣ ಸಂಪನ್ಮೂಲ ಕೇಂದ್ರದಲ್ಲಿ ಉದ್ಯೋಗಿಯಾಗಿದ್ದರು. ತನ್ನ ಸ್ನೇಹಿತೆಯೊಂದಿಗೆ ಸ್ಕೂಟರ್ನಲ್ಲಿ ತೆರಳುವಾಗ ಈ ಅನಾಹುತ ಸಂಭವಿಸಿದೆ, ಹಿಂಬದಿ ಕುಳಿತಿದ್ದ ಶ್ಯಾಮಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.