ಮಂಗಳೂರು :ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಸಹ ಮಹಾಮಾರಿ ಕೊರೊನಾ ಸೋಂಕಿಗೆ ಒಬ್ಬರು ಬಲಿಯಾಗಿದ್ದಾರೆ.
ಮಂಗಳೂರಿನಲ್ಲಿ ಕೊರೊನಾಗೆ ಓರ್ವ ಬಲಿ: ಸಾವಿನ ಸಂಖ್ಯೆ 18ಕ್ಕೆ ಏರಿಕೆ - ಕೊರೊನಾ ಸೋಂಕಿಗೆ ಸಾವನ್ನಪ್ಪಿದವರ ಸಂಖ್ಯೆ
ಕೊರೊನಾ ಸೋಂಕಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಸಹ ಒಬ್ಬರು ಸಾವನ್ನಪ್ಪಿದ್ದು, ಜಿಲ್ಲೆಯಲ್ಲಿ ಒಟ್ಟು ಸಾವನ್ನಪ್ಪಿದವರ ಸಂಖ್ಯೆ 18 ಕ್ಕೆ ಏರಿಕೆ ಆಗಿದೆ.
Manglure
ಜಿಲ್ಲೆಯಲ್ಲಿ ನಿನ್ನೆ ಮೂವರು ಕೊರೊನಾ ಸೋಂಕಿತರು ಸಾವನ್ನಪ್ಪಿದ್ದು ಇಂದು ಸಹ ಓರ್ವ ಸಾವನ್ನಪ್ಪಿದ್ದಾರೆ. ಈವರೆಗೆ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 18 ಕ್ಕೆ ಏರಿಕೆಯಾಗಿದೆ.
ಇಂದು ಮೃತಪಟ್ಟ 49 ವರ್ಷದ ವ್ಯಕ್ತಿ ಬಂಟ್ವಾಳ ತಾಲೂಕಿನ ಕಲ್ಲಡ್ಕ ನಿವಾಸಿಯಾಗಿದ್ದಾರೆ. ಕಳೆದ 20 ದಿನಗಳಿಂದ ಮನೆಯಲ್ಲಿ ಕಿಡ್ನಿ, ಟಿಬಿ ಮತ್ತು ಲಿವರ್ ಅನಾರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದರು. ಶನಿವಾರ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ.