ಸುಳ್ಯ:ಕೆಲವು ದಿನಗಳ ಹಿಂದೆ ಮಹಾರಾಷ್ಟ್ರದಿಂದ ಬಂದು ಸುಳ್ಯದಲ್ಲಿ ಕ್ವಾರಂಟೈನ್ ನಲ್ಲಿದ್ದ ಅಜ್ಜಾವರ ಗ್ರಾಮದ ವ್ಯಕ್ತಿಯೊಬ್ಬರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಇವರನ್ನು ಕೋವಿಡ್ ಆಸ್ಪತ್ರೆಗೆ ಸ್ಧಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸುಳ್ಯ: ಕ್ವಾರಂಟೈನ್ನಲ್ಲಿದ್ದ ವ್ಯಕ್ತಿಗೆ ಕೊರೊನಾ ಸೋಂಕು ದೃಢ
ಮಹಾರಾಷ್ಟ್ರದಿಂದ ಬಂದು ಸುಳ್ಯದ ಶಾಲೆಯೊಂದರಲ್ಲಿ ಕ್ವಾರಂಟೈನ್ನಲ್ಲಿದ್ದ 30 ವರ್ಷದ ವ್ಯಕ್ತಿಗೆ ಕೊರೊನಾ ದೃಢಪಟ್ಟಿದೆ.
ಈ ಮೂಲಕ ಸುಳ್ಯ ತಾಲೂಕಿನಲ್ಲಿ ಕೊರೊನಾ ಪ್ರಕರಣ ಮೂರಕ್ಕೆ ಏರಿಕೆಯಾಗಿದೆ. ಅಜ್ಜಾವರ ಗ್ರಾಮದ 30 ವರ್ಷ ವಯಸ್ಸಿನವರಾದ ಇವರು ಮಹಾರಾಷ್ಟ್ರದಿಂದ ಬಂದು ಶಾಲೆಯೊಂದರಲ್ಲಿ ಕ್ವಾರಂಟೈನ್ ನಲ್ಲಿದ್ದರು. ಇವರ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದ್ದು, ಕೊರೊನಾ ಇರುವುದು ದೃಢಪಟ್ಟಿದೆ.
ಇದೀಗ ಇವರನ್ನು ಮಂಗಳೂರು ಕೋವಿಡ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ನಡುವೆ ಸುಳ್ಯ ತಾಲೂಕು ಕಚೇರಿ ಸೀಲ್ ಡೌನ್ ಆಗುತ್ತದೆ ಎಂಬ ವದಂತಿ ಹಬ್ಬಿದೆ. ಇದು ಸುಳ್ಳು ಮತ್ತು ಆರೋಗ್ಯ ಅಧಿಕಾರಿಗಳು ಬೇಕಾದ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ ಎಂದು ಸುಳ್ಯ ತಹಶೀಲ್ದಾರ ಅನಂತ್ ಶಂಕರ್ ಅವರು ಈಟಿವಿ ಭಾರತಕ್ಕೆ ಮಾಹಿತಿ ನೀಡಿದ್ದಾರೆ.