ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಬ್ಬರಿಗೆ ಕೋವಿಡ್ -19 ದೃಢಪಟ್ಟಿದ್ದು, ಕೊರೊನಾ ಪ್ರಕರಣಗಳ ಸಂಖೈ 16 ಕ್ಕೆ ಏರಿಕೆಯಾಗಿದೆ.
ದ.ಕ. ಜಿಲ್ಲೆಯಲ್ಲಿ ಮತ್ತೊಂದು ಕೋವಿಡ್-19 ಪ್ರಕರಣ: ಕೊರೊನಾ ಪಾಸಿಟಿವ್ ಕೇಸ್ 16 ಕ್ಕೇರಿಕೆ - Mangalore corona news
ಬಂಟ್ವಾಳದ 67 ವರ್ಷದ ಮಹಿಳೆಗೆ ಕೋವಿಡ್-19 ದೃಢಪಟ್ಟಿದೆ. ತೀವ್ರ ಉಸಿರಾಟದ ತೊಂದರೆಯಿಂದ ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇವರಿಗೆ ಕೊರೊನಾ ಇರುವುದು ದೃಢಪಟ್ಟಿದೆ.
ದ.ಕ ಜಿಲ್ಲೆಯಲ್ಲಿ ಮತ್ತೊಂದು ಕೋವಿಡ್ 19 ಪ್ರಕರಣ
ಜಿಲ್ಲೆಯ ಬಂಟ್ವಾಳದ 67 ವರ್ಷದ ವೃದ್ಧೆಗೆ ಕೋವಿಡ್ -19 ದೃಢಪಟ್ಟಿದೆ. ತೀವ್ರ ಉಸಿರಾಟದ ತೊಂದರೆಯಿಂದ ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೊರೊನಾ ಇರುವುದು ದೃಢಪಟ್ಟಿದೆ. ಇವರು ಭಾನುವಾರ ಕೊರೊನಾದಿಂದ ಮೃತಪಟ್ಟ ಮಹಿಳೆ ಮನೆಯ ಸಮೀಪದವರು ಎಂದು ತಿಳಿದು ಬಂದಿದೆ.
ಜಿಲ್ಲೆಯಲ್ಲಿ ಒಟ್ಟು 16 ಪ್ರಕರಣ ದಾಖಲಾಗಿದ್ದರೆ, 12 ಮಂದಿ ಗುಣಮುಖರಾಗಿ ಒಬ್ಬರು ಮೃತಪಟ್ಟಿದ್ದಾರೆ. ಮೂವರು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.