ಮಂಗಳೂರು: ಮಂಗಳೂರು ನಗರದಲ್ಲಿ ಇಂದು ಮತ್ತೊರ್ವನಲ್ಲಿ ಕೋವಿಡ್ ಸೋಂಕು ದೃಢಪಟ್ಟಿದ್ದು, ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 25ಕ್ಕೆ ಏರಿಕೆಯಾಗಿದೆ.
ಮಂಗಳೂರಿನಲ್ಲಿ ಮತ್ತೊಂದು ಕೋವಿಡ್ ಸೋಂಕು ಪ್ರಕರಣ: ಆತಂಕದಲ್ಲಿ ಜನ - One more covid case reported in mangalore
ಮಂಗಳೂರಿನ ಬೋಳೂರು ಪ್ರದೇಶದ 51 ವರ್ಷದ ವ್ಯಕ್ತಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.
ವೆನ್ಲಾಕ್ ಆಸ್ಪತ್ರೆ
ಮಂಗಳೂರಿನ ಬೋಳೂರು ಪ್ರದೇಶದ 51 ವರ್ಷದ ವ್ಯಕ್ತಿಯಲ್ಲಿ ಕೊರೊನಾ ದೃಢಪಟ್ಟಿದೆ. ಬೋಳೂರುನಲ್ಲಿ ಈ ಮೊದಲು ಇಬ್ಬರಿಗೆ ಕೊರೊನಾ ದೃಢಪಟ್ಟಿತ್ತು. ಇದೀಗ ಮತ್ತೋರ್ವನಲ್ಲಿ ಸೋಂಕು ದೃಢಪಟ್ಟಿ ಜನರನ್ನು ಮತ್ತಷ್ಟು ಆತಂಕಕ್ಕೆ ಗುರಿ ಮಾಡಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈವರೆಗೆ 25 ಮಂದಿಗೆ ಕೊರೊನಾ ದೃಢಪಟ್ಟಿದ್ದು, ಇದರಲ್ಲಿ 12 ಮಂದಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಮೂವರು ಸಾವನ್ನಪ್ಪಿದ್ದು 10 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Last Updated : May 5, 2020, 3:32 PM IST