ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 38 ವರ್ಷದ ಮಹಿಳೆಗೆ ಕೋವಿಡ್ 19 ಸೋಂಕು ದೃಢಪಟ್ಟಿದೆ.
ಸೋಮೇಶ್ವರದ ಮಹಿಳೆಯಲ್ಲೂ ಸೋಂಕು ಪತ್ತೆ; ದ.ಕ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 34ಕ್ಕೇರಿಕೆ - ಮಂಗಳೂರು ಕೊರೊನ ಸುದ್ದಿ
ದ.ಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 34ಕ್ಕೆ ಏರಿಕೆಯಾಗಿದೆ. ಇದರಲ್ಲಿ 14 ಮಂದಿ ಗುಣಮುಖರಾಗಿದ್ದು ಮೂವರು ಸಾವನ್ನಪ್ಪಿದ್ದಾರೆ. 17 ಮಂದಿ ಮಂಗಳೂರಿನ ಕೋವಿಡ್ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ವೆನ್ಲಾಕ್
ಮಂಗಳೂರಿನ ಸೋಮೇಶ್ವರದ ದರಂದಾಬಾಗಿಲುವಿನ 38 ವರ್ಷದ ಮಹಿಳೆಗೆ ಕೋವಿಡ್ 19 ದೃಢಪಟ್ಟಿದೆ. ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಕೊರೊನಾ ತಗುಲಿದ್ದ ಕುಲಶೇಖರದ 80 ವರ್ಷದ ಮಹಿಳೆಯ ಸಂಪರ್ಕದಿಂದ ಈ ಮಹಿಳೆಗೆ ಸೋಂಕು ತಗುಲಿದೆ.
ದ.ಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 34ಕ್ಕೆ ಏರಿಕೆಯಾಗಿದೆ. ಇದರಲ್ಲಿ 14 ಮಂದಿ ಗುಣಮುಖರಾಗಿದ್ದು, ಮೂವರು ಸಾವನ್ನಪ್ಪಿದ್ದಾರೆ. 17 ಮಂದಿ ಮಂಗಳೂರಿನ ಕೋವಿಡ್ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.