ಸುಳ್ಯ:ಇನ್ನೋವಾ ಕಾರು ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸುಳ್ಯದಲ್ಲಿ ನಡೆದಿದೆ.
ಕಾರು - ಬೈಕ್ ಡಿಕ್ಕಿ: ಸ್ಥಳದಲ್ಲೆ ಮೃತಪಟ್ಟ ಬೈಕ್ ಸವಾರ - ಸ್ಥಳದಲ್ಲೆ ಮೃತಪಟ್ಟ ಬೈಕ್ ಸವಾರ
ಇನ್ನೋವಾ ಕಾರು ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸುಳ್ಯದಲ್ಲಿ ನಡೆದಿದೆ.
ಕಾರು - ಬೈಕ್ ಡಿಕ್ಕಿ
ಮೃತ ವ್ಯಕ್ತಿಯನ್ನು ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮದ ಮುರೂರು ನಿವಾಸಿ ಬಾಬು ನಾಯರ್ ಎಂದು ಗುರುತಿಸಲಾಗಿದೆ.
ಬಾಬು ಅವರು ತನ್ನ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಮುರೂರು ಎಂಬಲ್ಲಿ ಇನೋವಾ ಕಾರಿಗೆ ಡಿಕ್ಕಿಯಾದ್ದರಿಂದ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಸುಳ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿದ್ದಾರೆ.