ಕರ್ನಾಟಕ

karnataka

ETV Bharat / state

ನಾಳೆಯಿಂದ ಚಾರ್ಮಾಡಿಯಲ್ಲಿ ಲಘು ವಾಹನಗಳ ಸಂಚಾರಕ್ಕೆ ಅನುವು! - ಮಂಗಳೂರು

ಮಳೆಯಿಂದ ಚಾರ್ಮಾಡಿ ಘಾಟ್ ಪ್ರದೇಶದಲ್ಲಿ ಭೂಕುಸಿತವಾದ ಪರಿಣಾಮ ರಸ್ತೆ ಸಂಚಾರ ಬಂದ್ ಮಾಡಲಾಗಿತ್ತು. ಇದೀಗ ರಸ್ತೆ ತೆರವುಗೊಳಿಸಲಾಗಿದ್ದು, ಆ.12 ರಿಂದ ಲಘು ವಾಹನಗಳ ಸಂಚಾರಕ್ಕೆ ಅನುವು ಮಾಡಿ ಕೊಡಲಾಗಿದೆ.

Charmady Ghat
ಚಾರ್ಮಾಡಿಯಲ್ಲಿ ಲಘವಾಹನ ಸಂಚಾರಕ್ಕೆ ಅನುವು

By

Published : Aug 11, 2020, 11:41 PM IST

ಮಂಗಳೂರು: ಚಾರ್ಮಾಡಿ ಘಾಟ್ ಪ್ರದೇಶದಲ್ಲಿ ಭೂಕುಸಿತದ ಭಾಗಗಳನ್ನು ತೆರವುಗೊಳಿಸಲಾಗಿದ್ದು, ಆ.12(ನಾಳೆ) ರಿಂದ ಬೆಳಗ್ಗೆ 7 ಗಂಟೆಯಿಂದ ಸಂಜೆ 7 ರವೆಗೆ ಲಘು ವಾಹನಗಳ ಸಂಚಾರಕ್ಕೆ ಅನುವು ಮಾಡಿ ಕೊಡಲಾಗಿದೆ.

ಚಾರ್ಮಾಡಿಯಲ್ಲಿ ಲಘವಾಹನ ಸಂಚಾರಕ್ಕೆ ಅನುವು

ಆದರೆ ಸಂಜೆ 7 ರಿಂದ ಬೆಳಗ್ಗೆ 7ರವರೆಗೆ ಸಂಚಾರ ನಿರ್ಬಂಧ ಮಾಡಲಾಗಿದೆ. ಅಲ್ಲದೆ ಭಾರೀ ವಾಹನಗಳ ಸಂಚಾರ ನಿರ್ಬಂಧ ಯಥಾ ಪ್ರಕಾರ ಮುಂದಿನ‌ ಆದೇಶದವರೆಗೆ ಚಾಲ್ತಿಯಲ್ಲಿರುತ್ತದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ABOUT THE AUTHOR

...view details