ಕರ್ನಾಟಕ

karnataka

ETV Bharat / state

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವರುಣನ ಅಬ್ಬರ: ಆ. 9ರವರೆಗೆ ಆರೆಂಜ್ ಅಲರ್ಟ್ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಅಂದಾಜು 64.5 ಮಿ.ಮೀ ನಿಂದ 115 ಮಿ.ಮೀ ವರೆಗೆ ಮಳೆ ಸುರಿಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಅಲ್ಲದೆ, ಜಿಲ್ಲೆಯಾದ್ಯಂತೆ ಆರೆಂಜ್​ ಅಲರ್ಟ್​ ಘೋಷಿಸಿದೆ.

Orange Alert Announced in Dakshina Kannada District
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ

By

Published : Aug 4, 2020, 12:19 PM IST

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವರುಣನ ಆರ್ಭಟ ಜೋರಾಗಿದ್ದು, ಮುಂಜಾಗ್ರತ ಕ್ರಮವಾಗಿ ಆಗಸ್ಟ್ 9 ರವರೆಗೆ ಆರೆಂಜ್​ ಅಲರ್ಟ್ ಘೋಷಿಸಲಾಗಿದೆ.

ಜಿಲ್ಲೆಯಾದ್ಯಂತ ಮುಂದಿನ ಕೆಲ ದಿನಗಳು ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಅಂದಾಜು 64.5 ಮಿ.ಮೀ ನಿಂದ 115 ಮಿ.ಮೀ ವರೆಗೆ ಮಳೆ ಸುರಿಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಈಗಾಗಲೇ ಮಳೆಯಿಂದ ತಗ್ಗು ಪ್ರದೇಶಗಳಿಗೆ ಮಳೆಯ ನೀರು ನುಗ್ಗಿದೆ. ನದಿಗಳು ತುಂಬಿ ಹರಿಯುತ್ತಿರುವ ಹಿನ್ನೆಲೆ, ನೆರೆ ಭೀತಿ ಶುರುವಾಗಿದೆ. ಅರಬ್ಬೀ ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದ್ದು, ಮೀನುಗಾರಿಕೆಗೆ ತೆರಳದಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

ABOUT THE AUTHOR

...view details