ಕರ್ನಾಟಕ

karnataka

ETV Bharat / state

ರಸ್ತೆ ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡ ವ್ಯಕ್ತಿಯ ಅಂಗಾಂಗ ದಾನ - ಮಂಗಳೂರಿನಲ್ಲಿ ರಸ್ತೆ ಅಪಘಾತದಲ್ಲಿ ವ್ಯಕ್ತಿ ಸಾವು

ರಸ್ತೆ ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡ ವ್ಯಕ್ತಿಯ ಅಂಗಾಂಗ ದಾನ ಮಾಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

Organ donation of brain disabled person in Mangalore, man died in road accident at Mangalore, Mangalore news, ಮಂಗಳೂರಿನಲ್ಲಿ ಮೆದುಳು ನಿಷ್ಕ್ರಿಯಗೊಂಡ ವ್ಯಕ್ತಿಯ ಅಂಗಾಂಗ ದಾನ, ಮಂಗಳೂರಿನಲ್ಲಿ ರಸ್ತೆ ಅಪಘಾತದಲ್ಲಿ ವ್ಯಕ್ತಿ ಸಾವು, ಮಂಗಳೂರು ಸುದ್ದಿ,
ಮೆದುಳು ನಿಷ್ಕ್ರಿಯಗೊಂಡ ವ್ಯಕ್ತಿಯ ಅಂಗಾಂಗ ದಾನ

By

Published : Feb 19, 2022, 5:23 AM IST

Updated : Feb 19, 2022, 5:46 AM IST

ಮಂಗಳೂರು:ರಸ್ತೆ ಅಪಘಾತವೊಂದರಲ್ಲಿ ಮೆದುಳು ನಿಷ್ಕ್ರಿಯಗೊಂಡಿರುವ ವ್ಯಕ್ತಿಯ ಅಂಗಾಂಗಗಳನ್ನು ನಗರದ ಎ.ಜೆ. ಆಸ್ಪತ್ರೆಯಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮೂಲಕ ಶುಕ್ರವಾರ ಬೆಂಗಳೂರು ಸ್ಪರ್ಶ ಆಸ್ಪತ್ರೆಗೆ ರವಾನಿಸಲಾಯಿತು.

ಮೆದುಳು ನಿಷ್ಕ್ರಿಯಗೊಂಡ ವ್ಯಕ್ತಿಯ ಅಂಗಾಂಗ ದಾನ

ಕೇರಳ ರಾಜ್ಯದ ಕಣ್ಣೂರು ನಿವಾಸಿ ಕೆ.ವಿ.ರಮೇಶ್ (55) ಎಂಬ ವ್ಯಕ್ತಿಯ ಅಂಗಾಂಗವನ್ನು ದಾನ ಮಾಡಲು ಮೃತರ ಪತ್ನಿ ಮತ್ತು ಕುಟುಂಬ ಸದಸ್ಯರು ಒಪ್ಪಿಗೆ ನೀಡಿದರು. ಬಳಿಕ ಅಂಗಾಂಗ ದಾನದ ಪ್ರಕ್ರಿಯೆ ನಡೆದಿದೆ. ಮೃತರ ಲಿವರ್ ಅನ್ನು ಬೆಂಗಳೂರಿಗೆ ರವಾನಿಸಲಾಯಿತು. ಝಿರೋ ಟ್ರಾಫಿಕ್‌ ಮೂಲಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಿತು.

ಮೆದುಳು ನಿಷ್ಕ್ರಿಯಗೊಂಡ ವ್ಯಕ್ತಿಯ ಅಂಗಾಂಗ ದಾನ

ಓದಿ:ಬಾಕಿ ಬಿಲ್ ಪಾವತಿಗೆ ಪಟ್ಟು: ಕಸದ ಗೂಡಾದ ರಾಜ್ಯದ ರಾಜಧಾನಿ

ಅಲ್ಲಿಂದ ಸಂಜೆ 4:20ಕ್ಕೆ ಬೆಂಗಳೂರಿಗೆ ತೆರಳುವ ಇಂಡಿಗೋ ವಿಮಾನದಲ್ಲಿ ರವಾನಿಸಲಾಯಿತು. ಮೃತರ ಕಿಡ್ನಿ ಹಾಗೂ ಕಣ್ಣುಗಳನ್ನು ಕೆಎಂಸಿ ಮಣಿಪಾಲ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಮೆದುಳು ನಿಷ್ಕ್ರಿಯಗೊಂಡ ವ್ಯಕ್ತಿಯ ಅಂಗಾಂಗ ದಾನ
Last Updated : Feb 19, 2022, 5:46 AM IST

ABOUT THE AUTHOR

...view details