ಕರ್ನಾಟಕ

karnataka

ETV Bharat / state

ಆಸ್ಕರ್ ಫರ್ನಾಂಡಿಸ್ ಕುಟುಂಬಸ್ಥರಿಂದ ಅಂತಿಮ ದರ್ಶನ: ಸೆ.15ರಂದು ಸೈಂಟ್ ಪೆಟ್ರಿಕ್ ಚರ್ಚ್​​ನಲ್ಲಿ ಅಂತ್ಯಸಂಸ್ಕಾರ - ಸೈಂಟ್ ಪೆಟ್ರಿಕ್ ಚರ್ಚ್​​ನಲ್ಲಿ ಆಸ್ಕರ್ ಫರ್ನಾಂಡಿಸ್ ಅಂತ್ಯಸಂಸ್ಕಾರ

ಆಸ್ಕರ್ ಫರ್ನಾಂಡಿಸ್ ಅವರ ಪಾರ್ಥಿವ ಶರೀರದ ಅಂತ್ಯಸಂಸ್ಕಾರ ಸೆ.15ರಂದು ಬೆಂಗಳೂರಿನ ಸೈಂಟ್ ಪೆಟ್ರಿಕ್ ಚರ್ಚ್​​ನಲ್ಲಿ ನಡೆಯಲಿದೆ ಎಂದು ಮಾಜಿ ಸಚಿವ ರಮಾನಾಥ ರೈ ತಿಳಿಸಿದ್ದಾರೆ.

Oscar Fernandes
ಸೈಂಟ್ ಪೆಟ್ರಿಕ್ ಚರ್ಚ್​​ನಲ್ಲಿ ಆಸ್ಕರ್ ಫರ್ನಾಂಡಿಸ್ ಅಂತ್ಯಸಂಸ್ಕಾರ

By

Published : Sep 13, 2021, 5:54 PM IST

Updated : Sep 13, 2021, 7:46 PM IST

ಮಂಗಳೂರು:ಇಹಲೋಕ ತ್ಯಜಿಸಿದ ರಾಜ್ಯಸಭಾ ಸದಸ್ಯ ಆಸ್ಕರ್ ಫರ್ನಾಂಡಿಸ್ ಅವರ ಪತ್ನಿ, ಕುಟುಂಬಸ್ಥರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.

ಕುಟುಂಬಸ್ಥರಿಂದ ಅಂತಿಮ ದರ್ಶನ

ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯ ಶವಾಗಾರದಲ್ಲಿ‌ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದ್ದು, ಕ್ರೈಸ್ತ ಧರ್ಮಗುರುಗಳಿಂದ ಪ್ರಾರ್ಥನೆ ನೆರವೇರಿತು. ಆಸ್ಕರ್ ಫರ್ನಾಂಡಿಸ್ ಅವರ ಪತ್ನಿ‌ ಕುಟುಂಬಸ್ಥರು ದುಃಖ ತಪ್ತರಾಗಿ ಅಗಲಿದ ಪತಿಯ ಅಂತಿಮ ದರ್ಶನ ಪಡೆದರು. ಈ ಸಂದರ್ಭ ಕಾಂಗ್ರೆಸ್ ಮುಖಂಡರಾದ ರಮಾನಾಥ ರೈ, ವಿನಯ್ ಕುಮಾರ್ ಸೊರಕೆ, ಮಿಥುನ್ ರೈ ಹಾಗೂ ನೂರಾರು ಕಾರ್ಯಕರ್ತರು, ಆಸ್ಕರ್ ಅಭಿಮಾನಿಗಳು ಅಂತಿಮ ದರ್ಶನ ಪಡೆದರು.

ಸೆ.15ರಂದು ಅಂತ್ಯಸಂಸ್ಕಾರ:

ರಾಜ್ಯಸಭಾ ಸದಸ್ಯ ಆಸ್ಕರ್ ಫರ್ನಾಂಡಿಸ್ ಅವರ ಪಾರ್ಥಿವ ಶರೀರವನ್ನು ಫಾದರ್ ಮುಲ್ಲರ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಸೆ.15ರಂದು ಬೆಂಗಳೂರಿನ ಸೈಂಟ್ ಪೆಟ್ರಿಕ್ ಚರ್ಚ್​​ನಲ್ಲಿ ಅಂತ್ಯಸಂಸ್ಕಾರ ನಡೆಸಲಾಗುತ್ತದೆ ಎಂದು ರಮಾನಾಥ ರೈ ಹೇಳಿದರು.

ನಾಳೆ ಬೆಳಗ್ಗೆ 9.30ಗೆ ಉಡುಪಿ‌ ಚರ್ಚ್​ನಲ್ಲಿ ಪ್ರಾರ್ಥನೆ ಸಲ್ಲಿಸಲಾಗುತ್ತದೆ. 10.30ಕ್ಕೆ ಉಡುಪಿ ಕಾಂಗ್ರೆಸ್ ಕಚೇರಿಯಲ್ಲಿ ಅಂತಿಮ ದರ್ಶನಕ್ಕೆ ಪಾರ್ಥಿವ ಶರೀರವನ್ನು ಇರಿಸಲಾಗುತ್ತದೆ. ಮಧ್ಯಾಹ್ನ 2.30-5.30 ವರೆಗೆ ಮಂಗಳೂರು ಕಾಂಗ್ರೆಸ್ ಕಚೇರಿಯಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಬಳಿಕ ಮತ್ತೆ ಫಾದರ್ ಮುಲ್ಲರ್ ಶವಾಗಾರಕ್ಕೆ ರವಾನೆ ಮಾಡಲಾಗುತ್ತದೆ.

ಸೆ.15ರಂದು ಆಸ್ಕರ್ ಫರ್ನಾಂಡಿಸ್ ಅಂತ್ಯಸಂಸ್ಕಾರ

ಇದನ್ನೂ ಓದಿ: ರಾಜ್ಯಸಭಾ ಸದಸ್ಯ ಆಸ್ಕರ್‌ ಫರ್ನಾಂಡಿಸ್‌ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಮೋದಿ ಸೇರಿ ಗಣ್ಯರ ಕಂಬನಿ

ಸೆ.15 ರಂದು ಬೆಳಗ್ಗೆ 10.30ಗಂಟೆಗೆ ಮಿಲಾಗ್ರಿಸ್ ಚರ್ಚ್​ನಲ್ಲಿ‌ ಪೂಜೆ ನಡೆಸಿ ಬಳಿಕ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ‌ಬಳಿಕ ಬೆಂಗಳೂರಿನ ಸಂತ ಪೆಟ್ರಿಕ್ ಚರ್ಚ್​ನಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಗುತ್ತದೆ ಎಂದು ರಮಾನಾಥ್​ ರೈ ಹೇಳಿದರು.

ಇದನ್ನೂ ಓದಿ: 5 ಬಾರಿ ಉಡುಪಿ ಲೋಕಸಭಾ ಕ್ಷೇತ್ರದಿಂದ ಆಯ್ಕೆ, ಕೃಷಿಯಲ್ಲೂ ಎತ್ತಿದ 'ಕೈ': ಇಲ್ಲಿದೆ ಆಸ್ಕರ್ ಫರ್ನಾಂಡಿಸ್ ಜೀವನ ಚಿತ್ರಣ

Last Updated : Sep 13, 2021, 7:46 PM IST

ABOUT THE AUTHOR

...view details