ಮಂಗಳೂರು: ನಗರದ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಅನವಶ್ಯಕವಾಗಿ ರಸ್ತೆಗಿಳಿದು ಲಾಕ್‌ಡೌನ್ ಆದೇಶ ಉಲ್ಲಂಘಿಸಿದ ಸುಮಾರು 50ಕ್ಕೂ ಅಧಿಕ ವಾಹನಗಳನ್ನು ಇಂದು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ದ.ಕ ಜಿಲ್ಲೆಯನ್ನು ಮೂರು ದಿನಗಳ ಕಾಲ ಸಂಪೂರ್ಣ ಬಂದ್ ಮಾಡಿ ಸಾರ್ವಜನಿಕರು ಮನೆ ಬಿಟ್ಟು ಹೊರ ಬರಬಾರದು ಎಂದು ಸೂಚನೆ ನೀಡಲಾಗಿತ್ತು. ಆದರೂ ಕೆಲವರು ರಸ್ತೆಗಿಳಿದಿದ್ದರು. ಈ ಹಿನ್ನೆಲೆ ಕಾರು, ಬೈಕ್, ಸ್ಕೂಟರ್ ಸೇರಿದಂತೆ ಸುಮಾರು 50ಕ್ಕೂ ಅಧಿಕ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಹಿಂದೆಯೇ ಅನಗತ್ಯವಾಗಿ ರಸ್ತೆಗಿಳಿದವರ ವಾಹನಗಳನ್ನು ವಶಪಡಿಸಿಕೊಳ್ಳುವುದಾಗಿ ಪೊಲೀಸ್ ಆಯುಕ್ತ ಡಾ. ಪಿ.ಎಸ್.ಹರ್ಷ ಎಚ್ಚರಿಕೆ ನೀಡಿದ್ದರು.